Tumkurnews
ಕೊರಟಗೆರೆ; ತಾಲ್ಲೂಕಿನ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ದೇವರ ದರ್ಶನ, ಪೂಜಾಧಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಕೇಶವಮೂರ್ತಿ ತಿಳಿಸಿದ್ದಾರೆ
ಶನಿವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ನಿಧನರಾಗಿದ್ದು, ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಭಾನುವಾರ ಮಧ್ಯಾಹ್ನ 1 ಗಂಟೆ ವರೆಗೆ ದೇವಸ್ಥಾನದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ದೇವರ ದರ್ಶನ, ಪೂಜೆ, ಪ್ರಸಾದ ವಿತರಣೆ ಇತ್ಯಾದಿ ಪೂಜಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿ ದೇವಸ್ಥಾನದ ಬಾಗಿಲು ಹಾಕಲಾಗಿದೆ. ಭಾನುವಾರ ಮಧ್ಯಾಹ್ನ 1 ಗಂಟೆ ಬಳಿಕ ಎಂದಿನಂತೆ ಪೂಜಾ ವಿಧಿಗಳನ್ನು ಮುಂದುವರೆಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿ ಕೇಶವ್ ಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಇನ್ನಿಲ್ಲ
ಭಾನುವಾರ ಅಂತ್ಯ ಸಂಸ್ಕಾರ; ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಮಲ ಪ್ಯಾಲೇಸ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು, ಭಾನುವಾರ ಬೆಳಗ್ಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಮೃತರ ಬಂಧುಗಳು ತಿಳಿಸಿದ್ದಾರೆ.
ಕೊರಟಗೆರೆ; ನಿರುದ್ಯೋಗಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours