ವೀರ ಸಾವರ್ಕರ್ ಫೋಟೋ ಹರಿದು ಹಾಕಿ ದುಷ್ಕೃತ್ಯ ಮೆರೆದ ಕಿಡಿಗೇಡಿಗಳು
Tumkurnews
ತುಮಕೂರು; ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರುವ ಫ್ಲಕ್ಸ್’ನಲ್ಲಿದ್ದ ವೀರ ಸಾವರ್ಕರ್ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
76ನೇ ಸ್ವಾತಂತ್ರ್ಯ ದಿನ; ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭಾಷಣ; ಸಮಗ್ರ ವರದಿ
ನಗರದ ಅಶೋಕ ರಸ್ತೆಯ ಎಂಪ್ರೆಸ್ ಕಾಲೇಜು ಮುಂಭಾಗ ನಗರ ಶಾಸಕ ಜಿ.ಬಿ ಜ್ಯೋತಿಗಣೇಶ್ ಅವರು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವ ಫ್ಲೆಕ್ಸ್ ಅಳವಡಿಸಿದ್ದರು. ಕಿಡಿಗೇಡಿಗಳು ಸಾವರ್ಕರ್ ಭಾವಚಿತ್ರವಿರುವ ಫ್ಲೆಕ್ಸನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆಯಿಂದ ಪ್ರೇರೇಪಿತಗೊಂಡು ನಗರದಲ್ಲಿ ಕೂಡ ಕಿಡಿಗೇಡಿಗಳು ವೀರ ಸಾವರ್ಕರ್ ಫೋಟೋ ಹರಿದು ಹಾಕಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
KSRTC; ತುಮಕೂರು ವಿಭಾಗಕ್ಕೆ ಒಂದೇ ದಿನ 1 ಕೋಟಿ ಆದಾಯ!
ಮೂರು ದಿನಗಳ ಹಿಂದೆ ಫ್ಲೆಕ್ಸ್ ಹಾಕಲಾಗಿದ್ದು, ಅಂದಿನಿಂದ ಎಲ್ಲ ಫ್ಲೆಕ್ಸ್’ಗಳು ಸುಸ್ಥಿತಿಯಲ್ಲಿದ್ದವು. ಆದರೆ ಸ್ವಾತಂತ್ರ್ಯ ದಿನಾಚರಣೆ ದಿನದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಹರಿದು ಹಾಕಿದ್ದಾರೆ. ಈ ಕುರಿತು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ನಾಗರೀಕರು ತೀವ್ರ ಆಕ್ರೋಶ ವ್ಯಕ್ತಪಡಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours