ವಿಕಲ ಚೇತನ ಅಭ್ಯರ್ಥಿಗಳಿಂದ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
Tumkurnews
ತುಮಕೂರು: ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿವಿಧ 8 ಯೋಜನೆಗಳಿಗೆ ಸುವಿಧ ತಂತ್ರಾಂಶದಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ ಹಣ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ್ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ ಹಾಗೂ ವೈದ್ಯಕೀಯ ಪರಿಹಾರ ನಿಧಿ ಯೋಜನೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯಸಭಾ ಸದಸ್ಯ ಜಗ್ಗೇಶ್ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ
ಅರ್ಹ ಅಭ್ಯರ್ಥಿಗಳು URL:https://suvidha.karnataka.gov.in ಜಾಲತಾಣದ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಅರ್ಜಿ ಸಲ್ಲಿಸಿರುವ ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶಿ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ರವರಿಗೆ ಸೆಪ್ಟೆಂಬರ್ 20, 2022ರೊಳಗಾಗಿ ಸಲ್ಲಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆ ವಿರುದ್ಧ ತನಿಖೆಗೆ ಆದೇಶ
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours