ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
Tumkurnews
ತುಮಕೂರು: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ಐ.ಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in ಇಲ್ಲಿ ಸಂಪರ್ಕಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.




+ There are no comments
Add yours