ಶೈಕ್ಷಣಿಕ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

1 min read

ಶೈಕ್ಷಣಿಕ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

Tumkurnews.in
ತುಮಕೂರು; ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಭರ್ತಿಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 25, 2023 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ದೂ.ಸಂ.: 0816-2278124 ಅಥವಾ ಮೊ.ಸಂ. 9741691379ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ 8 ವರ್ಷಕ್ಕೆ ಇನ್ಸ್‌ಪೆಕ್ಟರ್ ಹುದ್ದೆಗೇರಿದ ಬಾಲಕ!: ಶಿವಮೊಗ್ಗದ ಹೃದಯವಂತ ಪೊಲೀಸ್

About The Author

You May Also Like

More From Author

+ There are no comments

Add yours