ಸೆಪ್ಟೆಂಬರ್ 3ರಂದು 26 ಕಡೆ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

1 min read

 

ಸೆಪ್ಟೆಂಬರ್ 3ರಂದು 26 ಕಡೆ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

Tumkurnews
ತುಮಕೂರು: ತುಮಕೂರು ನಗರದ 20 ಮತ್ತು ಮಧುಗಿರಿ ಪಟ್ಟಣದ 6 ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 3ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.

ಗೃಹಲಕ್ಷ್ಮಿಗೆ ಈಗಲೂ ನೋಂದಣಿ ಮಾಡಿಸಬಹುದೇ?; ಮುರಳೀಧರ ಹಾಲಪ್ಪ ಸ್ಪಷ್ಟನೆ
ನಿಷೇಧಾಜ್ಞೆಯು ಸೆಪ್ಟೆಂಬರ್ 3ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆಯು ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮಿ; ಜಿಲ್ಲೆಯ 1.35ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆ: ಉಳಿದವರಿಗೆ ಯಾವಾಗ? ಇಲ್ಲಿದೆ ಮಾಹಿತಿ

You May Also Like

More From Author

+ There are no comments

Add yours