ನಿಗದಿತ ಸಮಯಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ: ಜಿಲ್ಲಾಧಿಕಾರಿ ಸೂಚನೆ
Tumkur news
ತುಮಕೂರು: ಸರ್ಕಾರಿ ಅಧಿಕಾರಿ, ನೌಕರರು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿ ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ-ಕಾರ್ಯಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಅಧಿಕಾರಿ, ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ-ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.
+ There are no comments
Add yours