ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್.ನರಸಿಂಹರಾಜು ದಿಢೀರ್ ರಾಜೀನಾಮೆ!
Tumkurnews
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್. ನರಸಿಂಹರಾಜು ಅವರು ಗುರುವಾರ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಇವರ ರಾಜೀನಾಮೆ ಅಂಗೀಕರಿಸಿದ ರಾಜ್ಯಾಧ್ಯಕ್ಷ ಷಡಾಕ್ಷರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ತಿಪಟೂರು ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಇ. ರಮೇಶ್ ಅವರನ್ನು ಮುಂದಿನ ಆದೇಶದ ವರೆಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಭಾರ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ನೂತನ ಅಧ್ಯಕ್ಷ ಹೆಚ್.ಇ . ರಮೇಶ್ ಅವರು ಗುರುವಾರ ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿಯೂ ಅಧಿಕಾರದಲ್ಲಿರುವ ಎನ್. ನರಸಿಂಹರಾಜು ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜ್ಯ ಸಂಘದಲ್ಲೇ ಮುಂದುವರೆಯಲಿದ್ದಾರೆ.
ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ತಿಪಟೂರು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವ ಹೆಚ್.ಇ. ರಮೇಶ್ ಅವರು ಜಿಲ್ಲಾ ಸಂಘದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಆರ್. ಪರಮೇಶ್, ಖಜಾಂಚಿ ಡಿ.ಆರ್. ಹರೀಶ್‌ಕುಮಾರ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ಪದ್ಮರಾಜು ಡಿ., ಜಿಲ್ಲಾ ಜಂಟಿ ಕಾರ್ಯದರ್ಶಿ ಎನ್. ವಸಂತಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ರಘು, ಸಂಘಟನಾ ಕಾರ್ಯದರ್ಶಿ ಸಿದ್ದರಾಜು ಕೆ.ಆರ್. ಅವರು ಹಾಜರಿದ್ದು ನೂತನ ಅಧ್ಯಕ್ಷರಿಗೆ ಶುಭಕೋರಿದರು.
+ There are no comments
Add yours