ತಾಲ್ಲೂಕು ಪಂಚಾಯತಿಯಲ್ಲಿ ‘ಡಾ: ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ
Tumkurnews
ತುಮಕೂರು: ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿಂದು ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಅವರು ಡಾ: ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಬಡವರ, ದೀನ ದಲಿತರ, ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ದುಡಿದರು. ಸಮಾಜದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಸಿಗಬೇಕು ಎನ್ನುವುದು ಅವರ ಆಶಯವಾಗಿತ್ತು. ಪ್ರತಿಯೊಬ್ಬರೂ ಡಾ: ಬಿ.ಆರ್. ಅಂಬೇಡ್ಕರ್ ಅವರ ಮಾರ್ಗದರ್ಶನ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸೋಣ. ಅವರು ಕಂಡ ಸಮಾನತೆಯ ಕನಸನ್ನು ನನಸು ಮಾಡಲು ನಾವೆಲ್ಲರೂ ಸೇರಿ ಸಂಕಲ್ಪ ಮಾಡೋಣ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಲೋಕೇಶ್ ಕುಮಾರ್ ಬಿ, ಸಹಾಯಕ ನಿರ್ದೇಶಕ(ಗ್ರಾ.ಉ.) ಮಂಜುನಾಥ್ ಎಸ್.ಎಸ್, ಸಹಾಯಕ ನಿರ್ದೇಶಕ(ಅಕ್ಷರ ದಾಸೋಹ) ಗಂಗಾಧರ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ವರ್ಗ ಹಾಜರಿದ್ದರು.




+ There are no comments
Add yours