ತುಮಕೂರು, (ಜೂ.22) tumkurnews.in
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಣಿಯಾಗಿರುವ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ವತಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ನಿಗಮದ ಸಹಾಯಕ ನಿರ್ದೇಶಕ ಡಾ.ಕೆ ನಾಗಣ್ಣ ತಿಳಿಸಿದ್ದಾರೆ.
ಜಿಲ್ಲೆಯ ಕುರಿ ಮತ್ತು ಉಣ್ಣೆ ಸಂಘಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಸಾಕಾಣಿಕೆದಾರರಿಂದ ಅರ್ಜಿಗಳನ್ನು ಪಡೆದು ಸ್ಥಳೀಯ ಬ್ಯಾಂಕುಗಳಿಗೆ ಸಲ್ಲಿಸಬೇಕು. ಸ್ಥಳೀಯ ಬ್ಯಾಂಕ್‍ನ ವ್ಯವಸ್ಥಾಪಕರು ಹೆಚ್ಚಿನ ಆಸಕ್ತಿವಹಿಸಿ ಸಂಘಗಳ ಪ್ರತಿನಿಧಿಗಳು ನೀಡುವ ಅರ್ಜಿಗಳನ್ನು ಸ್ವೀಕರಿಸಿ ಶೀಘ್ರವಾಗಿ ಕುರಿ, ಮೇಕೆ ಸಾಕಾಣಿಕೆದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಕಾರ್ಡ್‍ಗಳನ್ನು ನೀಡುವ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಪ್ರೋತ್ಸಾಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
+ There are no comments
Add yours