20 ಸಾವಿರ ಜನರಿಗೆ ಕೊರೋನಾ ಟೆಸ್ಟ್; ಪರಿಸ್ಥಿತಿ ಬಹಿರಂಗ ಪಡಿಸಿದ ಮಾಧುಸ್ವಾಮಿ

1 min read

ತುಮಕೂರು(ಜು.6) tumkurnews.in

ಜಿಲ್ಲಾಡಳಿತದಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದ್ದರೂ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಒಟ್ಟು 252 ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಭಾನುವಾರ ಒಂದೇ ದಿನದಲ್ಲಿ 31 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದುವರೆಗೆ ವರದಿಯಾದ 252 ಸೋಂಕಿತರ ಪೈಕಿ 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಉಳಿದಂತೆ 183 ಸಕ್ರಿಯ ಪ್ರಕರಣಗಳಿದ್ದು, 8 ಮಂದಿ ಮರಣ ಹೊಂದಿದ್ದಾರೆ. ಈವರೆಗೆ 20,512 ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 1395 ಜನರನ್ನು ನಿಗಾವಣೆಯಲ್ಲಿಡಲಾಗಿದೆ. 16,879 ಮಾದರಿಗಳು ನೆಗೆಟಿವ್ ಪ್ರಕರಣವೆಂದು ವರದಿಯಾಗಿದೆ. ಪ್ರಸ್ತುತ 566 ಪ್ರಾಥಮಿಕ ಹಾಗೂ 829 ದ್ವಿತೀಯ ಸಂಪರ್ಕಿತರಿದ್ದಾರೆ ಎಂದು ಮಾಹಿತಿ ನೀಡಿದರು

About The Author

You May Also Like

More From Author

+ There are no comments

Add yours