ಕೊರೋನಾ ನಿಯಂತ್ರಣಕ್ಕೆ ಜನರ ಮುಂದೆ 12 ಬೇಡಿಕೆ ಇರಿಸಿದ ಸಚಿವ ಜೆ.ಸಿ ಮಾಧುಸ್ವಾಮಿ

1 min read

ತುಮಕೂರು(ಜು.6) tumkurnews.in

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಸೋಂಕು ನಿಯಂತ್ರಣಕ್ಕೆ ಜನರ ಸಹಕಾರ ಕೋರಿದ್ದಾರೆ. ಜನರು ಸಹಕಾರ ನೀಡದಿದ್ದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟವಾಗಲಿದೆ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಸಚಿವರು ಮಾಡಿರುವ ಮನವಿ:
1) ಗಂಭೀರ ಖಾಯಿಲೆಯಿಂದ ಬಳಲುತ್ತಿರುವವರಿಗೆ ಕೊರೋನಾ ಸೋಂಕು ತಗಲಿದರೆ ಗುಣಪಡಿಸುವುದು ಕಷ್ಟಸಾಧ್ಯ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಉದಾಸೀನ ಮಾಡದೆ ಕೆಮ್ಮು, ನೆಗಡಿ, ಶೀತ, ಜ್ವರ, ಮತ್ತಿತರ ರೋಗಲಕ್ಷಣಗಳು ಕಂಡುಬಂದರೆ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು
2) ರೋಗಲಕ್ಷಣಗಳು ಕಂಡುಬಂದ ರೋಗಿಗಳಿಗೆ ಮನೆಯಲ್ಲಿಯೇ ಸ್ವಯಂ ಔಷಧೋಪಚಾರದ ಪ್ರಯೋಗ ಮಾಡಿ ಕಾಲಹರಣ ಮಾಡಬಾರದು.
3) ರೋಗ ಉಲ್ಬಣವಾಗಿ ಅಸಹಾಯಕ ಸ್ಥಿತಿ ತಲುಪಿದಾಗ ಆಸ್ಪತ್ರೆಗೆ ಕರೆತಂದರೆ ಪ್ರಯೋಜನವಾಗುವುದಿಲ್ಲ.
ರೋಗಿಯನ್ನು ತಕ್ಷಣವೇ ಪರೀಕ್ಷೆಗೆ ಒಳಪಡಿಸುವುದರಿಂದ ಅನಾಹುತಗಳನ್ನು ತಡೆಯಬಹುದು.
4) ಸಾರ್ವಜನಿಕರು ಗೃಹ ದಿಗ್ಬಂಧನ(ಹೋಮ್ ಕ್ವಾರೆಂಟೈನ್)ವನ್ನು ಗಂಭೀರವಾಗಿ ಪರಿಗಣಿಸದೇ ಇರುವುದೂ ಸಹ ಸೋಂಕು ಹೆಚ್ಚಾಗಿ ಹರಡಲು ಕಾರಣವಾಗಿದೆ. ಕ್ವಾರಂಟೈನ್ ನಿಯಮ ಪಾಲಿಸಬೇಕು.
5) ಸಾಂಸ್ಥಿಕ ದಿಗ್ಬಂಧನ (ಇನ್ಸ್ಟಿಟ್ಯೂಷನಲ್ ಕ್ವಾರೆಂಟೈನ್)ಗೆ ಒಳಗಾಗಲು ಜನರು ಸಹಕರಿಸುತ್ತಿಲ್ಲ. ಸಹಕರಿಸಬೇಕು.
6) ಹೋಮ್ ಕ್ವಾರೆಂಟೈನ್ ಆದವರು ಇತರರೊಂದಿಗೆ ನಿಕಟ ಸಂಪರ್ಕ ಹೊಂದುವುದನ್ನು ತಪ್ಪಿಸದಿದ್ದರೆ ಮುಂದೆ ಬಹು ಕ್ಲಿಷ್ಟಕರ ಸಮಸ್ಯೆ ಎದುರಾಗುವುದರಲ್ಲಿ ಸಂದೇಹವಿಲ್ಲ.
7)ಈಗಾಗಲೇ ಸೋಂಕು ಗ್ರಾಮಗಳಿಗೂ ಕಾಲಿಟ್ಟಿರುವುದರಿಂದ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯನೇ ಆಗಿದ್ದರೂ ಸಹ ಹೊರಗಿನಿಂದ ಬಂದವರನ್ನು ತಪಾಸಣೆಗೊಳಪಡಿಸದೇ ಮನೆಯಲ್ಲಿಟ್ಟುಕೊಳ್ಳಬಾರದು.

8)ಹೊರ ಜಿಲ್ಲೆಯಿಂದ ಬರುವವರ ಬಗ್ಗೆ ಜಿಲ್ಲಾಡಳಿತ ಅಥವಾ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಸಹಕರಿಸಬೇಕು. ಇದರಿಂದ ನಿಗಾವಹಿಸಲು ಸಾಧ್ಯವಾಗುತ್ತದೆ.
9) ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕೋವಿಡ್ 19 ಸೋಂಕನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕು.
10) ಪೋಷಕರು ತಮ್ಮ ಮಕ್ಕಳನ್ನು ಹೊರಗಡೆ ಬಿಡಬಾರದು. ಮಕ್ಕಳಿಗೆ ರೋಗ ತಗಲಿದರೆ ನಿಯಂತ್ರಿಸುವುದು ಬಹಳ ಕಷ್ಟ.
11) ಸೋಂಕಿತರು ಗುಣಮುಖರಾದ ಕೂಡಲೇ ಎಲ್ಲೆಂದರಲ್ಲಿ ಓಡಾಡದೆ, ಸಮುದಾಯದಲ್ಲಿ ಬೆರೆಯದೆ ಕನಿಷ್ಟ ಒಂದು ವಾರಗಳ ಕಾಲ ಹೋಮ್ ಕ್ವಾರೆಂಟೈನ್‍ಗೆ ಒಳಗಾಗಬೇಕು.
12) ಕ್ವಾರೆಂಟೈನ್ ಅವಧಿ 14 ದಿನಗಳ ನಂತರವೂ ಸೋಂಕು ದೃಢಪಟ್ಟ ನಿದರ್ಶನಗಳಿರುವುದರಿಂದ ಮುಂಜಾಗ್ರತೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

About The Author

You May Also Like

More From Author

+ There are no comments

Add yours