ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

1 min read

ಬೆಂಗಳೂರು; ರಾಜ್ಯಾದ್ಯಂತ ಶಾಲಾಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ತರಗತಿಗೆ ತೆರಳುತ್ತಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಹಾಗೂ ಉಚಿತ ಬಸ್ ಪಾಸ್‌ ಸೌಲಭ್ಯವನ್ನು ನೀಡುತ್ತಿದೆ. ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.
ಉಚಿತ ಬಸ್ ಪಾಸ್; ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ಪಾಸ್ ಸೌಲಭ್ಯ ದೊರೆಯುತ್ತದೆ. ಆದರೆ ಪಾಸಿನ ಸಂಸ್ಕರಣ ಶುಲ್ಕ 100 ರೂ., ಹಾಗೂ ಅಪಘಾತ ಪರಿಹಾರ ನಿಧಿ ವಂತಿಕೆ ತಿಂಗಳಿಗೆ 5 ರೂ.ನಂತೆ 10 ತಿಂಗಳಿಗೆ 50 ರೂ., ಹಾಗೂ 12 ತಿಂಗಳಿಗೆ 60 ರೂ.ಗಳನ್ನು ನೀಡಬೇಕಾಗುತ್ತದೆ. ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತವಾಗಿದ್ದು, ಸಂಸ್ಕರಣ ‌ಮತ್ತು ಅಪಘಾತ ಪರಿಹಾರ ವಂತಿಕೆಯಾಗಿ 150 ರೂ.ಗಳನ್ನು ಪಾವತಿಸಬೇಕಾಗಿರುತ್ತದೆ.
ಉಳಿದಂತೆ ಇತರೆ ಎಲ್ಲಾ ವರ್ಗದ ವಿದ್ಯಾರ್ಥಿಗಳು ತಮ್ಮ ಕೋರ್ಸ್‌ ಗೆ ತಕ್ಕಂತೆ ನಿಗದಿತ ರಿಯಾಯಿತಿ ಶುಲ್ಕ ಪಾವತಿಸಿ ಬಸ್ ಪಾಸ್ ಪಡೆಯಬಹುದಾಗಿದೆ.
ಪಾಸ್ ಪಡೆಯುವುದೇಗೆ?; ಬಸ್ ಪಾಸ್ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಕೆ.ಎಸ್.ಆರ್.ಟಿ.ಸಿಯಿಂದ ಆ ಬಗ್ಗೆ ಪ್ರಕಟಣೆ ನೀಡಲಾಗುತ್ತದೆ. ಆ ಮಾಹಿತಿಯನ್ನು ಮುಂದಿನ ದಿನಗಳಲ್ಲಿ www.tumkurnews.in ನಲ್ಲಿ ಪಡೆಯಬಹುದಾಗಿದೆ.

ವಿದ್ಯಾರ್ಥಿ ಬಸ್ ಪಾಸ್ ಗೆ ಏನು ಮಾಡುವುದು?; ಇಲ್ಲಿದೆ KSRTC ಮಾಹಿತಿ

About The Author

You May Also Like

More From Author

+ There are no comments

Add yours