ತುಮಕೂರಿನ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

1 min read

Tumkurnews
ತುಮಕೂರು; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೇವಕ ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅಗತ್ಯ ಮಾಹಿತಿ ಇಲ್ಲಿದೆ. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಕರೆದಿದೆ. ಅರ್ಜಿಗಳನ್ನು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್ ಸೈಟ್ “http://district.ecourt.gov.in/tumkuronlinerecruitment” ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ ಲೈನ್ ನಲ್ಲಿ 30/05/2022ರಿಂದ 15/06/2022ರ ರಾತ್ರಿ 11.59 ರವರೆಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ
ಹುದ್ದೆಗಳ ಸಂಖ್ಯೆ; 51
ವೇತನ ಶ್ರೇಣಿ; 17000-400-18600-450-20400-500-22400-550-24600-600-27000-650-28950 ಮತ್ತು ಇತರೆ ಭತ್ಯೆಗಳು.
ಶೈಕ್ಷಣಿಕ ಅರ್ಹತೆ; SSLC ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ವಯೋಮಿತಿ; ಕನಿಷ್ಠ ವಯೋಮಿತಿ- 18 ವರ್ಷ, ಗರಿಷ್ಠ ವಯೋಮಿತಿ(ಸಾಮಾನ್ಯ ವರ್ಗ)- 35, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ವರ್ಷ, ಪ.ಜಾ/ಪ.ಪಂ/ಪ್ರವರ್ಗ -1- 40 ವರ್ಷ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆ, ಮಾಜಿ ಸೈನಿಕರು ಹಾಗೂ ವಿಕಲಚೇತನರಿಗೆ ಕರ್ನಾಟಕ ಸಿವಿಲ್ ಸೇವೆಗಳು(ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೇಲೆ ನೀಡಲಾಗಿರುವ ನ್ಯಾಯಾಲಯದ ವೆಬ್ ಸೈಟ್ ‌ನಲ್ಲಿ ಪರಿಶೀಲಿಸಿಕೊಳ್ಳಬಹುದು.

ಮೀನುಗಾರಿಕೆ ಇಲಾಖೆ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours