ತುಮಕೂರಿನಲ್ಲಿ ಕುರುಬರ ಜಾಗೃತಿ ಸಮಾವೇಶ; ಸಿದ್ದರಾಮಯ್ಯ ಭಾಗಿ

1 min read

Tumkurnews
ತುಮಕೂರು; ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಕುರುಬರ ಸಮಾಜಕ್ಕೆ ಸರ್ಕಾರದಿಂದ ಸಿಗಬೇಕಾಗಿರುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಳಿದಾಸ ವಿದ್ಯಾವರ್ಧಕ ಸಂಘ (ರಿ), ಜಿಲ್ಲಾ ಕುರುಬರ ಸಂಘ (ರಿ), ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲೆಯ ಪದಾಧಿಕಾರಿ ಹಾಗೂ ನಿರ್ದೇಶಕರುಗಳ ಸಹಯೋಗದೊಂದಿಗೆ ಮೇ.28 ರಂದು ಶನಿವಾರ ನಗರದ ಶಿರಾಗೇಟ್ ಬಳಿಯಿರುವ ಕಾಳಿದಾಸ ಪ್ರೌಢಶಾಲೆ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕುರುಬರ ಜಾಗೃತಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ ರಾಮಚಂದ್ರಪ್ಪ ತಿಳಿಸಿದರು.

ವಿದ್ಯಾರ್ಥಿ ಬಸ್ ಪಾಸ್ ಗೆ ಏನೇನು ದಾಖಲೆಗಳು ಬೇಕು?; ಇಲ್ಲಿದೆ ಮಾಹಿತಿ
ಜಿಲ್ಲೆಯಲ್ಲಿ ಸುಮಾರು 3.50 ಲಕ್ಷ ಜನಸಂಖ್ಯೆ ಹೊಂದಿರುವ ಕುರುಬ ಸಮಾಜಕ್ಕೆ ಇಂದಿಗೂ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ, ಇದರ ಜೊತೆಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಾಮಾಜಿಕವಾಗಿ ನಮ್ಮ ಸಮಾಜ ಜಾಗೃತಿಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯನ್ನು ಬಲಪಡಿಸಲು ಈ ಸಮಾವೇಶ ನಡೆಯಲಿದೆ ಎಂದರು.

ನ್ಯಾಯಾಂಗವನ್ನು ಬಿಜೆಪಿ ಪಕ್ಷ ನಡೆಸುವುದಿಲ್ಲ; ಡಿಕೆಶಿಕೆ ಬಿಜೆಪಿ ಟಾಂಗ್
ಸಮಾವೇಶಕ್ಕೆ ಸಿದ್ಧರಾಮಯ್ಯ; ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ಮಾತ್ರ ಆಹ್ವಾನಿಸಲಾಗಿದೆ. ಯಾಕೆಂದರೆ ಹಿಂದುಳಿದ ಸಮಾಜಗಳಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿರುವ ಅವರಿಗೆ ಹಿಂದುಳಿದ ಸಮಾಜಗಳ ಮೇಲೆ ಬಹಳಷ್ಟು ಕಾಳಜಿಯನ್ನು ಹೊಂದಿದ್ದಾರೆ ಎಂದರು.
ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಕುರುಬ ಸಮಾಜ ಸಾಕಷ್ಟು ಪ್ರಗತಿ ಸಾಧಿಸಿಲ್ಲ, ಸಮಾಜದ ಒಳಗೆ ಯಾವುದೇ ಒಡಕು, ಭಿನ್ನಾಭಿಪ್ರಾಯ ಪಕ್ಷಬೇಧಕ್ಕೆ ಅವಕಾಶ ಕೊಡದೆ ಒಂದಾಗಬೇಕಾದ ಅನಿವಾರ್ಯತೆ ಬಂದಿದೆ. ಇಂದು ಅನೇಕ ಬಲಿಷ್ಠ ಸಮುದಾಯಗಳ ಮುಖಂಡರು ತಮ್ಮ ಸಮುದಾಯಗಳಿಗೆ 2ಎ ಮೀಸಲಾತಿಗಾಗಿ ಆಗ್ರಹಿಸುತ್ತಿದ್ದಾರೆ. ಹಿಂಬಾಗಿಲಿನಿಂದ ಮೀಸಲಾತಿ ಪಡೆದುಕೊಳ್ಳಲು ಹೊರಟಿದ್ದಾರೆ. ಇದರ ವಿರುದ್ಧ ಅನೇಕ ಹಿಂದುಳಿದ ವರ್ಗಗಳ ಪರವಾಗಿ ಧ್ವನಿ ಎತ್ತುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
1931ರಲ್ಲಿ ಮೊಟ್ಟಮೊದಲ ಬಾರಿಗೆ ಜಾತಿವಾರು ಸಮೀಕ್ಷೆ ಮಾಡಲಾಯಿತು. ಆ ನಂತರ 1941ರಲ್ಲಿ ಎರಡನೇ ಮಹಾಯುದ್ಧ ಆರಂಭವಾದಾಗ ಜಾತಿವಾರು ಸಮೀಕ್ಷೆಯನ್ನು ನಿಲ್ಲಿಸಲಾಯಿತು. ಸ್ವಾತಂತ್ರ್ಯ ಬಂದ ನಂತರ ಜಾತಿವಾರು ಸಮೀಕ್ಷೆ ನಡೆದೇ ಇಲ್ಲ, ಜಾತಿವಾರು ಸಮೀಕ್ಷೆ ಆದರೆ ಯಾವ ಯಾವ ಜಾತಿಗಳಿಗೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಪ್ರಾತಿನಿಧ್ಯ ಸಿಗಬೇಕೋ ಅದೆಲ್ಲಾ ಸಿಗುತ್ತದೆ ಎಂದರು.
ಕಾಂತರಾಜು ಆಯೋಗದ ವರದಿ ಜಾರಿಯಾಗದಂತೆ ತಡೆಯುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಜಾಗೃತಿ ಮೂಡಿಸಬೇಕಿದೆ. ಕಾಂತರಾಜು ವರದಿಯಲ್ಲಿ ಯಾವ ಯಾವ ಜಾತಿಗಳು ಇಂದು ಯಾವ ಪರಿಸ್ಥಿತಿಯಲ್ಲಿವೆ ಎಂಬುದನ್ನು ಕೂಲಂಕುಷವಾಗಿ ತಿಳಿಸಲಾಗಿದೆ. ಆದರೆ ಸರ್ಕಾರಕ್ಕೆ ಮಾತ್ರ ಕಾಂತರಾಜು ವರದಿ ಜಾರಿಗೆ ತರಲು ಮುಂದಾಗುತ್ತಿಲ್ಲ, ಎಲ್ಲಾ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸಬೇಕಿದ್ದ ಸರ್ಕಾರ ಇಂದು ಕೆಲವೇ ವರ್ಗಗಳ ಓಲೈಕೆಗಾಗಿ ಸೀಮಿತವಾಗಿದೆ ಎಂದು ಆರೋಪಿಸಿದರು.

ಮಡಿವಾಳ ಸಮಾಜಕ್ಕೆ MLC ಸ್ಥಾನ, MLA ಟಿಕೆಟ್; ಸಿದ್ದರಾಮಯ್ಯ ಭರವಸೆ
1976 ರಿಂದಲೂ ವಿದ್ಯಾಭ್ಯಾಸ, ಉದ್ಯೋಗದಲ್ಲಿ ಮೀಸಲಾತಿ ಸಿಗುತ್ತಿತ್ತು, ಈಗ ಬಹಳಷ್ಟು ಗೊಂದಲವಾಗಿದೆ. ನಮಗೆ ಸಿಗಬೇಕಾದ ಸವಲತ್ತುಗಳನ್ನು ಈಗಿನ ಸರ್ಕಾರ ಕಟ್ ಮಾಡುತ್ತಿದೆ ಎಂದು ದೂರಿದರು.
ಹಿಂದುಳಿದ ವರ್ಗಗಳ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ 205 ಜಾತಿಗಳು ಸೇರುತ್ತವೆ. ಈ ನಿಗಮಕ್ಕೆ ಈ ಹಿಂದೆ 100 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಈಗ 80 ಕೋಟಿ ರೂ. ಮಾತ್ರ ಮೀಸಲಿಟ್ಟಿದ್ದಾರೆ. ನಿಗಮಕ್ಕೆ ಸರ್ಕಾರ ಸರಿಯಾಗಿ ಅನುದಾನ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದರು.
ಈ ಎಲ್ಲಾ ಅನ್ಯಾಯಗಳ ವಿರುದ್ಧ ಜಾಗೃತಿ ಮೂಡಿಸಲು ಮತ್ತು ಧ್ವನಿ ಎತ್ತಲು ಅತಿ ಹಿಂದುಳಿದ ವರ್ಗಗಳಿಗೆ ದೊರೆಯುವ ಸರ್ಕಾರಿ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಅವುಗಳನ್ನು ದೊರಕಿಸಿಕೊಡುವ ಜವಾಬ್ದಾರಿ ಹಿಂದುಳಿದ ಸಮುದಾಯಗಳ ಹಿರಿಯಣ್ಣನಂತಿರುವ ನಮ್ಮ ಕುರುಬ ಸಮಾಜದ ಮೇಲಿದೆ. ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಮುಂದೆ ನಿಂತು ನಮ್ಮೆಲ್ಲರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಡಬೇಕಿದೆ. ಹೋರಾಟದ ಮುಖಾಂತರ ನಮ್ಮ ಹಿಂದುಳಿದ ಸಮುದಾಯಗಳಿಗೆ ದೊರೆಯಬೇಕಿರುವ ಹಕ್ಕು ಮತ್ತು ಸವಲತ್ತುಗಳನ್ನು ಪಡೆಯಬೇಕಿರುವ ಹಿನ್ನಲೆಯಲ್ಲಿ ಮೇ.28 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕುರುಬರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸುಮಾರು 25 ರಿಂದ 30 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್!; ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಅಧ್ಯಕ್ಷ ಸುಬ್ರಮಣ್ಯ, ಸಂಘದ ಆಂತರಿಕ ಲೆಕ್ಕ ಪರಿಶೋಧಕ ಸಿ.ಪುಟ್ಟರಾಜು, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕರುಗಳಾದ ಕೃಷ್ಣಮೂರ್ತಿ, ರಾಮಕೃಷ್ಣಪ್ಪ, ಟಿ.ಇ. ರಘುರಾಮ್, ಎಸ್. ಶಂಕರ್, ಭಾಗ್ಯಮ್ಮ, ತಿಪಟೂರು ಹೊನ್ನವಳ್ಳಿ ಕ್ಷೇತ್ರದ ಮಾಜಿ ಜಿಪಂ ಸದಸ್ಯ ನಾರಾಯಣ್, ಮುಖಂಡರಾದ ಸಾಂಬಸದಾಶಿವರೆಡ್ಡಿ, ಮಾಲೂರು ಸೋಮಣ್ಣ, ನಿವೃತ್ತ ಡಿವೈಎಸ್ಪಿ ಎನ್.ಸಿ.ನಾಗರಾಜು, ಮಧುಗಿರಿ ತಾಲೂಕಿನ ಕುರುಬ ಸಂಘದ ಶಿವಣ್ಣ, ಮರಿಯಣ್ಣ, ಕಾಳಿದಾಸ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ದೊಡ್ಡಯ್ಯ ಕುಣಿಗಲ್, ಪ್ರಧಾನ ಕಾರ್ಯದರ್ಶಿ ಭೀಮರಾಜು, ನಿರ್ದೇಶಕರುಗಳಾದ ಗಿರೀಶ್, ಗೂಳೂರು ಕೃಷ್ಣಮೂರ್ತಿ, ತುಮಕೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಮಹೇಶ್, ಜ್ವಾಲಮಾಲ ರಾಜಣ್ಣ, ಕನಕ ಯುವ ಸೇನೆ ಅಧ್ಯಕ್ಷ ಕೆಂಪರಾಜು, ಕಾಂಗ್ರೆಸ್ ಯುವ ಮುಖಂಡ ಗುರುಪ್ರಸಾದ್ ಮತ್ತಿತರರಿದ್ದರು.

About The Author

You May Also Like

More From Author

+ There are no comments

Add yours