ಜಾತ್ರೆ, ಉತ್ಸವ, ಹಬ್ಬ, ಜಯಂತಿಗಳ ಮೇಲೆ ಜಿಲ್ಲಾಡಳಿತದ ಹದ್ದಿನ ಕಣ್ಣು!; ಏಕೆ, ಏನಾಯಿತು?

1 min read

 

Tumkurnews
ತುಮಕೂರು: ಇನ್ಮುಂದೆ ಜಾತ್ರೆ, ಉತ್ಸವ, ಹಬ್ಬ ಹಾಗೂ ಜಯಂತಿಗಳ ಮೇಲೆ ಜಿಲ್ಲಾಡಳಿತದ ಅಧಿಕಾರಿಗಳು ಹದ್ದಿನ ಕಣ್ಣು ಇಡಲಿದ್ದಾರೆ! ಹೌದು, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಬಾಲ್ಯ ವಿವಾಹಕ್ಕೆ ಮುಂದಾದಲ್ಲಿ ಕಾನೂನಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಇಸಿಐಎಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕುರಿತು ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್, ವೈಯಕ್ತಿಕ ವಿವಾಹಗಳು ಮತ್ತು ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರ ವಹಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕುರಿತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚನೆ ನೀಡಿದರು.

ರೈಲ್ವೆ ಇಲಾಖೆಯಲ್ಲಿ 3ಸಾವಿರಕ್ಕೂ‌ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರು ಬಾಲ್ಯ ವಿವಾಹ ನಡೆಯುವ ಬಗ್ಗೆ ಮುಂಚಿತವಾಗಿ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದು ಹೇಳಿದರು.

ಸರ್ಕಾರ ಒಂದು ಪಕ್ಷಕ್ಕೆ ಸೀಮಿತವಾಗಬಾರದು: ಪರಮೇಶ್ವರ್ ಕಿಡಿ

ಸಖಿ ಒನ್ ಸ್ಟಾಫ್ ಸೆಂಟರ್ ಆರಂಭ: ಅತ್ಯಾಚಾರ ಅಥವಾ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯಕೀಯ ನೆರವು, ಕಾನೂನು ಸಲಹೆ, ಪೊಲೀಸ್ ನೆರವನ್ನು ಒದಗಿಸಲಾಗುತ್ತಿದ್ದು, 36.75 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪಿ.ಆರ್.ಇ.ಡಿ. ವತಿಯಿಂದ ನಿರ್ಮಿಸಲಾಗಿರುವ ‘ಸಖಿ ಒನ್ ಸ್ಟಾಫ್ ಸೆಂಟರ್’ ಕಟ್ಟಡದ ಉದ್ಘಾಟನೆ ನೆರವೇರಿಸಬೇಕಿದೆ. ಈ ಕುರಿತು ಶೀಘ್ರವಾಗಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಿ.ಆರ್.ಇ.ಡಿ. ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

About The Author

You May Also Like

More From Author

+ There are no comments

Add yours