ತುಮಕೂರು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 111 ಬಾಲೆಯರಿಗೆ ಕಂಕಣ ಕಂಟಕ!

1 min read

Tumkur News
ತುಮಕೂರು: ಜಿಲ್ಲೆಯಲ್ಲಿ 2021-22ನೇ ಸಾಲಿನ ಒಂದೇ ವರ್ಷದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 111 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ‌ ಸಭೆಯಲ್ಲಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡುವಾಗ ಈ ವಿಚಾರ ಗೊತ್ತಾಗಿದೆ.

ಜಾತ್ರೆ, ಉತ್ಸವ, ಹಬ್ಬ, ಜಯಂತಿಗಳ ಮೇಲೆ ಜಿಲ್ಲಾಡಳಿತದ ಹದ್ದಿನ ಕಣ್ಣು!; ಏಕೆ, ಏನಾಯಿತು?

ದಾಖಲಾಗಿರುವ 111 ಪ್ರಕರಣ ಪೈಕಿ 100 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದ್ದು, 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸಭೆಗೆ ಮಾಹಿತಿ ನೀಡಿದರು.

ರೈಲ್ವೆ ಇಲಾಖೆಯಲ್ಲಿ 3ಸಾವಿರಕ್ಕೂ‌ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಲು ‘ವೀಡಿಯೋ ಆನ್ ವೀಲ್’ ಕಾರ್ಯಕ್ರಮಾಡಿದ್ದೇವೆ. ಜಿಲ್ಲೆಯಲ್ಲಿ 205 ಕಡೆ ಬಾಲ್ಯವಿವಾಹದ ಬಗ್ಗೆ ಅರಿವು ಮೂಡಿಸಲಾಗಿದ್ದು, ಒಟ್ಟು 36044 ಜನರು ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದರು.

About The Author

You May Also Like

More From Author

+ There are no comments

Add yours