ಪ್ರಮೋದ್ ಮುತಾಲಿಕ್ ಅನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಿ: ತಾಜುದ್ದೀನ್ ಷರೀಫ್ ಮನವಿ

1 min read

 

Tumkur News
ತುಮಕೂರು: ಪ್ರಚೋದನಕಾರಿ ಹೇಳಿಕೆ‌ ನೀಡಿರುವ ಆರೋಪದಡಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಮೇಲೆ‌ ಕೇಸ್ ದಾಖಲಿಸಿಕೊಂಡು, ಅವರನ್ನು ಬಂಧಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಮಾಡಿಕೊಂಡಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಭಗ್ನ ಪ್ರೇಮಿಯಿಂದ ಹಲ್ಲೆ: ಸಾರ್ವಜನಿಕರಿಂದ ಧರ್ಮದೇಟು

ಈ ಕುರಿತು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರು ನಗರದ ಜಿಲ್ಲಾ ಪೊಲೀಸ್ ಕಚೇರಿಗೆ‌ ಭೇಟಿ ನೀಡಿ, ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಮುಂದೂಡಿಕೆ

ಮೈಕ್ ಬಳಕೆ ವಿಚಾರದಲ್ಲಿ ಬಿಜೆಪಿ ಸರಕಾರಕ್ಕೆ ಸಾಧ್ಯವಾಗದಿದ್ದಲ್ಲಿ ಅಧಿಕಾರ ಬಿಟ್ಟು ಕೆಳಗಿಳಿಯಲಿ, ನನಗೆ 24 ಗಂಟೆ ಸಮಯ ನೀಡಲಿ, ಗುಂಡುಹೊಡೆದು ಆದೇಶ ಜಾರಿಗೊಳಿಸುತ್ತೇವೆ ಎಂದು ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

You May Also Like

More From Author

+ There are no comments

Add yours