ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ಶಿಬಿರ

1 min read

Tumkur news
ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.

ಜೂ. 18ರಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್  ಮಾತನಾಡಿ, ಆರೋಗ್ಯ ಇಲಾಖಾಧಿಕಾರಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿ, ಆಯುಷ್ಮಾನ್ ಕಾರ್ಡು ವಿತರಣೆ, ಕಣ್ಣಿನ ತಪಾಸಣೆ ನಡೆಸಿ ಕನ್ನಡಕಗಳನ್ನು ವಿತರಿಸಬೇಕು ಎಂದು  ಹೇಳಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಕಂದಾಯ ಸಚಿವ ಅಶೋಕ್

ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದ ಅಹವಾಲು ಸಲ್ಲಿಸುವವರಿಗೆ  ಹಿಂಬರಹ ನೀಡುವ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.

ಖ್ಯಾತನಟ ಅಲ್ಲು ಅರ್ಜುನ್ ವಿರುದ್ಧ ಎಫ್ಐಆರ್!

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರನ್ನು ಸೇರಿಸಬೇಕು. ಸ್ಥಳೀಯ ಪಂಚಾಯತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

About The Author

You May Also Like

More From Author

+ There are no comments

Add yours