ಕಾಮೆಡ್-ಕೆ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

1 min read

Tumkur News
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ಆಡಳಿತ ಮಂಡಳಿ ಕೋಟಾದ ಸೀಟುಗಳ ಪ್ರವೇಶಕ್ಕೆ ಕರ್ನಾಟಕ ವೃತ್ತಿಪರ ಕಾಲೇಜುಗಳ ಒಕ್ಕೂಟ (ಕಾಮೆಡ್‌-ಕೆ) ಜೂ. 19ಕ್ಕೆ “ಯುಜಿಇಟಿ-2022′ ಪರೀಕ್ಷೆ ನಡೆಸಲಿದೆ.

ಆದಾಯ ತೆರಿಗೆ ಇಲಾಖೆಯಲ್ಲಿ ರೂ. 39,100ವರೆಗೆ ವೇತನ ಪಡೆಯುವ ಅವಕಾಶ!

ದೇಶಾದ್ಯಂತ 154 ನಗರಗಳ 230 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜೂ. 19ರಂದು ಬೆಳಗ್ಗೆ 9ರಿಂದ 12 ಮತ್ತು ಮಧ್ಯಾಹ್ನ 2.30ರಿಂದ 5.30ರ ವರೆಗೆ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 61,635 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 66 ಸಾವಿರ ಮಂದಿ ನೋಂದಣಿ ಮಾಡಿಕೊಂಡಿದ್ದರು.

KEA ಹುದ್ದೆಗಳಿಗೆ ಅರ್ಜಿ ಆಹ್ವಾನ; 1 ಲಕ್ಷ ವರೆಗೆ ವೇತನ!

ನೋಂದಾಯಿತ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ಕಾಮೆಡ್‌-ಕೆ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಪ್ರವೇಶ ಪತ್ರದ ಜತೆಗೆ ಮಾನ್ಯತೆ ಹೊಂದಿರುವ ಗುರುತಿನ ಚೀಟಿ, ಪಾಸ್‌ಪೋರ್ಟ್‌ ಅಳತೆಯೆ ಎರಡು ಕಲರ್‌ ಫೋಟೋವನ್ನು ತರಬೇಕು ಎಂದು ಸೂಚಿಸಲಾಗಿದೆ.

About The Author

You May Also Like

More From Author

+ There are no comments

Add yours