ಯುವ ಕೌಶಲ್ಯ ದಿನದ ಪ್ರಯುಕ್ತ ಪ್ರಬಂಧ ಸ್ಪರ್ಧೆ

1 min read

Tumkur News

ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ
ಅಭಿವೃದ್ಧಿ ನಿಗಮದ ವತಿಯಿಂದ ಜು.15 ರಂದು ವಿಶ್ವ ಯುವ ಕೌಶಲ್ಯ ಆಚರಿಸುತ್ತಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ೧) ಕೈಗಾರಿಕೆ- ಶೈಕ್ಷಣಿಕ ಒಗ್ಗೂಡುವಿಕೆಯಿಂದ ಕೌಶಲ್ಯದ ಅಂತರವನ್ನು ಕಡಿಮೆ ಮಾಡುವುದು, ೨) ಶಕ್ತಿಯತ ಹಾಗೂ ಸುಸ್ಥಿರ ಬೆಳವಣಿಗೆಗಾಗಿ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮಾರ್ಗಗಳು, ೩) ಕೌಶಲ್ಯ ಮತ್ತು ಸಾಮರ್ಥ್ಯಗಳ ಮೇಲೆ ಕೇಂದ್ರಿಕೃತವಾದ ಉನ್ನತ ಶಿಕ್ಷಣದ ಬಗ್ಗೆ
ಮರುಚಿಂತನೆ ಹಾಗೂ ೮ ರಿಂದ ೧೨ನೇ ತರಗತಿ/ ಐಟಿಐ ವಿದ್ಯಾರ್ಥಿಗಳಿಗೆ ೧) ಯುವಕರಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಮುಖ್ಯತೆ ೨) ಶಿಕ್ಷಣದಲ್ಲಿ ಕೌಶಲ್ಯಾಭಿವೃದ್ಧಿಯ ಪ್ರಾಮುಖ್ಯತೆ ಎಂಬ ವಿಷಯಗಳಿದ್ದು ಕನ್ನಡ ಅಥವ ಇಂಗ್ಲಿಷ್ ಭಾಷೆಯಲ್ಲಿ ಯಾವುದಾದರೂ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು ೧೦೦೦-೧೨೦೦ ಪದಗಳಿಗೆ ಮೀರದಂತೆ ಪ್ರಬಂಧ ರಚಿಸಿ ಜುಲೈ ೧೦ ರೊಳಗೆ https:// kaushalkar.com/ aap/ skill- essay – competition ಮೂಲಕ ಸಲ್ಲಿಸಬಹುದಾಗಿದೆ. ಜುಲೈ ೧೫ ರಂದು ಬಹುಮಾನ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಪದವಿ ಪೂರ್ವ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿಜೇತರಿಗೆ ಆಯಾ ಜಿಲ್ಲೆಗಳ ‘ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜೊತೆಯಲ್ಲಿ ಇರುವ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

About The Author

You May Also Like

More From Author

+ There are no comments

Add yours