Tumkurnews
ತುಮಕೂರು; ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರೆಯೂರು ಕೆನರಾ ಬ್ಯಾಂಕಿನಲ್ಲಿ ಕೃಷಿ ಸಾಲ ಮೇಳಕ್ಕೆ ಚಾಲನೆ
ಈ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮತ್ತು ಸಾಮಾನ್ಯ ಮಹಿಳೆಯರು ಯಾವುದಾದರೂ ಲಾಭದಾಯಕ ಚಟುವಟಿಕೆಯಲ್ಲಿ ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಬ್ಯಾಂಕಿನಿಂದ ಗರಿಷ್ಠ 3 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು.
ಸಾಮಾನ್ಯ ವರ್ಗದ ಮಹಿಳೆಯರು, ವಿಧವೆ, ಅಂಗವಿಕಲ ಮತ್ತು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಗರಿಷ್ಠ 90 ಸಾವಿರ ರೂ. ಅಥವಾ ಶೇ.30ರಷ್ಟು ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗರಿಷ್ಠ 1,50,000 ರೂ. ಅಥವಾ ಶೇ.50ರಷ್ಟು ಸಹಾಯಧನವನ್ನು ನೀಡಲಾಗುವುದು.
ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಈ ಸೌಲಭ್ಯಕ್ಕೆ 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ವಾರ್ಷಿಕ ಆದಾಯ 2 ಲಕ್ಷ ರೂ.ಗಳ ಒಳಗಿರಬೇಕು. ಸಾಮಾನ್ಯ ವರ್ಗದವರಾಗಿದ್ದಲ್ಲಿ ವಾರ್ಷಿಕ ಆದಾಯ 1.5ಲಕ್ಷ ರೂ.ಗಳ ಒಳಗಿರಬೇಕು.
ಆಸಕ್ತರು ಜಾತಿ, ಆದಾಯ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಶಾಲಾ ವರ್ಗಾವಣೆ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಯೋಜನಾ ವರದಿ, ಬ್ಯಾಂಕ್ ಪಾಸ್‍ಪುಸ್ತಕದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಧವೆ, ಅಂಗವಿಕಲರು, ಸಂಕಷ್ಟಗೊಳಗಾದ ಮಹಿಳೆಯರು ತಮ್ಮ ಅರ್ಜಿಯೊಂದಿಗೆ ನಿಗದಿತ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
ಕೊರಟಗೆರೆ; ನಿರುದ್ಯೋಗಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಅರ್ಹ ಮಹಿಳೆಯರು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಜುಲೈ 20ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜುಲೈ 30 ರೊಳಗಾಗಿ ಸದರಿ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತುಮಕೂರು ನಗರದ ದೂ.ಸಂ. 0816-2272204, ತುಮಕೂರು ಗ್ರಾಮಾಂತರ: 0816-2285021, ಚಿ.ನಾ.ಹಳ್ಳಿ: 08133-268245, ಗುಬ್ಬಿ: 08131-223731, ಕೊರಟಗೆರೆ: 08138-232315, ಕುಣಿಗಲ್: 08132-222691, ಮಧುಗಿರಿ: 08137-282452, ಶಿರಾ: 08135-277578, ಪಾವಗಡ: 08136-245733, ತುರುವೇಕೆರೆ: 08139-288468 ಹಾಗೂ ತಿಪಟೂರು: 08134-252991ನ್ನು ಸಂಪರ್ಕಿಸಬಹುದಾಗಿದೆ ಅಥವಾ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಥವಾ ಅಭಿವೃದ್ಧಿ ನಿರೀಕ್ಷಕರು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.




+ There are no comments
Add yours