Tumkurnews
ತುಮಕೂರು; ಸಂಚಾರಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಬಟವಾಡಿ ಹತ್ತಿರದ ಎಪಿಎಂಸಿ ಯಾರ್ಡ್ ಮುಂಭಾಗದ ಎನ್ಹೆಚ್ 48 ರಸ್ತೆಯಲ್ಲಿ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸುಮಾರು 25 ವರ್ಷದ ಅಪರಿಚಿತ ವ್ಯಕ್ತಿಯು ಗಾಯಗೊಂಡು ಚಿಕಿತ್ಸೆಗಾಗಿ ಜುಲೈ 14ರಂದು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತನ ದೇಹವನ್ನು ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours