Tumkurnews
ತುಮಕೂರು; ನಗರ ವ್ಯಾಪ್ತಿಯಲ್ಲಿ ಅಧಿಕ ಮಳೆಯಿಂದಾಗಿ ರಸ್ತೆಗಳು ಕುಸಿಯುತ್ತಿರುವುದು, ಮನೆಗಳಿಗೆ ನೀರು ನುಗ್ಗುತ್ತಿರುವುದು, ರಾಜಕಾಲುವೆಗಳಲ್ಲಿ ಹೂಳು ತುಂಬಿ ಮಳೆ ನೀರು ಸರಾಗವಾಗಿ ಹರಿಯದೆ ಇರುವುದು, ಕೆರೆ ಕೋಡಿ ಒಡೆದು ರಸ್ತೆಗಳು ಜಲಾವೃತವಾಗಿರುವುದು ಹಾಗೂ ಅಧಿಕ ಮಳೆಯಿಂದಾಗಿ ಪ್ರಾಣಹಾನಿಯಾಗಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡೆಲ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಿಕೊಂಡು ಇಲಾಖಾ ಮುಖ್ಯಸ್ಥರು ಮುನ್ನೆಚ್ಚರಿಕೆ ವಹಿಸಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು.
ಒಂದೇ ಮಳೆಗೆ ತುಮಕೂರಿನಲ್ಲಿ 48 ಮನೆಗಳಿಗೆ ಹಾನಿ; ವಿಪತ್ತು ನಿರ್ವಹಣೆಗೆ ತಂಡ ರಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಮಕೂರು ಮಹಾನಗರಪಾಲಿಕೆ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಸಣ್ಣ ನೀರಾವರಿ ಇಲಾಖೆ, ಅರಣ್ಯ ಇಲಾಖೆ, ಮತ್ತು ರಾಷ್ಟ್ರೀಯ ಹೆದ್ದಾರಿ-4 ತುಮಕೂರು ವಿಭಾಗ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ನೋಡೆಲ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದರು.
ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
ತುಮಕೂರು ಪಾಲಿಕೆ ವ್ಯಾಪ್ತಿಯಿಂದ ನಗರ ವ್ಯಾಪ್ತಿಯಲ್ಲಿ ಚರಂಡಿಗಳ ಸ್ವಚ್ಛತೆ, ರಸ್ತೆ ಗುಂಡಿಗಳನ್ನು ಮುಚ್ಚುವುದು, ಸ್ವಚ್ಛತೆ ಕಾಪಾಡುವುದು, ಪಾಲಿಕೆ ವತಿಯಿಂದ ನಿರ್ವಹಿಸಿರುವ ಕಾಮಗಾರಿಗಳ ನಿರ್ವಹಣೆ, ಒಂದನೇ ಹಂತದ ಯುಜಿಡಿ ನಿರ್ವಹಣೆ, ನೀರು ಸರಬರಾಜು, ಬೀದಿ ದೀಪಗಳ ನಿರ್ವಹಣೆ ಮತ್ತು ಪಾಲಿಕೆಗೆ ಒಳಪಡುವ ಕೆರೆಗಳ ನಿರ್ವಹಣೆ, ಲೋಕೋಪಯೋಗಿ ಬಂದರು ಇಲಾಖೆಯಿಂದ ನಿರ್ವಹಿಸಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳ ನಿರ್ವಹಣೆ, ಯುಜಿಡಿ ಮ್ಯಾನ್ಹೋಲ್ ಎತ್ತರಿಸುವುದು, ಕಾಮಗಾರಿಗಳ ನ್ಯೂನ್ಯತೆ ಸರಿಪಡಿಸಿ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಕ್ರಮವಹಿಸುವುದು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಮಾನಿಕೆರೆ ಸುತ್ತಮುತ್ತ ರಾಜಕಾಲುವೆಗಳ ಸ್ವಚ್ಛತೆ ಮತ್ತು ನಿರ್ವಹಣೆ, ಉದ್ಯಾನವನಗಳ ಸ್ವಚ್ಛತೆ ಮತ್ತು ನಿರ್ವಹಣೆ ಮಾಡುವಂತೆ ಸೂಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 111 ಬಾಲೆಯರಿಗೆ ಕಂಕಣ ಕಂಟಕ!
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಪಾಲಿಕೆ ವ್ಯಾಪ್ತಿಯಲ್ಲಿ ಎರಡನೇ ಹಂತದ ಯುಜಿಡಿ ಮತ್ತು ನೀರು ಸರಬರಾಜು ನಿರ್ವಹಣೆ ಮಾಡುವುದು, ಸ್ಮಾರ್ಟ್ ಸಿಟಿ ವತಿಯಿಂದ ಅಭಿವೃದ್ಧಿ ಪಡಿಸಿರುವ ಚರಂಡಿ ಮತ್ತು ರಸ್ತೆ, ಫುಟ್ಪಾತ್ ಇತ್ಯಾದಿಗಳಲ್ಲಿ ಯಾವುದೇ ನ್ಯೂನ್ಯತೆ ಕಂಡು ಬಾರದಂತೆ ತಕ್ಷಣವೇ ದುರಸ್ತಿ ಪಡಿಸಲು ಕ್ರಮವಹಿಸುವುದು, ಸಣ್ಣ ನೀರಾವರಿ ಇಲಾಖೆಯವರು ತಮ್ಮ ಇಲಾಖೆಗೆ ಸಂಬಂಧಿಸಿದ ಕೆರೆ ಮತ್ತು ರಾಜಕಾಲುವೆಗಳನ್ನು ನಿರ್ವಹಣೆ ಮಾಡುವುದು, ಅಧಿಕ ಮಳೆಯಿಂದ ಯಾವುದೇ ಮಳೆ ಅವಘಡಗಳು ಆಗದಂತೆ ಕ್ರಮವಹಿಸುವುದು, ಅರಣ್ಯ ಇಲಾಖೆಯವರು ಅಕ್ಕ-ತಂಗಿ ಕೆರೆ ಹಾಗೂ ಕೆರೆಯ ಅಕ್ಕಪಕ್ಕದ ರಾಜಕಾಲುವೆಗಳ ನಿರ್ವಹಣೆ ಮತ್ತು ಯಾವುದೇ ಅವಘಡಗಳು ಆಗದಂತೆ ಕ್ರಮವಹಿಸುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ-4 ಅಧಿಕಾರಿಗಳು ತುಮಕೂರು ನಗರದಲ್ಲಿ ತಮ್ಮ ವ್ಯಾಪ್ತಿಗೆ ಬರುವ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು, ಚರಂಡಿಗಳ ಹೂಳನ್ನು ತೆಗೆದು ಸ್ವಚ್ಛಗೊಳಿಸುವಂತೆ ಸೂಚಿಸಿದರು.
ಕಳ್ಳರ ಪಾಲಿನ ಸ್ವರ್ಗ; ತುಮಕೂರು KSRTC ಬಸ್ ನಿಲ್ದಾಣ!
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರು ಮಳೆಹಾನಿ ಅವಘಡಗಳಿಗೆ ಸಂಬಂಧಿಸಿದಂತೆ ಸನ್ನದ್ಧರಾಗಬೇಕು. ದಿನದ 24 ಗಂಟೆಯೂ ಸಾರ್ವಜನಿಕರ ನೋವಿಗೆ ಸ್ಪಂದಿಸಬೇಕು ಮತ್ತು ತಮ್ಮ ವ್ಯಾಪ್ತಿಯಲ್ಲಿನ ಆಂಬುಲೆನ್ಸ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು, ಸಾರ್ವಜನಿಕರಿಂದ ಕರೆ ಬಂದ ತಕ್ಷಣ ಸ್ಪಂದಿಸಬೇಕು, ಈ ನಿಟ್ಟಿನಲ್ಲಿ ಆಂಬುಲೆನ್ಸ್ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours