ತುಮಕೂರು, ತಿಪಟೂರು, ಶಿರಾದಲ್ಲಿ ಭಾನುವಾರ‌ ನಿಷೇದಾಜ್ಞೆ; ಡಿಸಿ ಆದೇಶ

1 min read

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ

Tumkurnews

ತುಮಕೂರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆಪಿಟಿಸಿಎಲ್‍ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳಿಗೆ ಆಗಸ್ಟ್ 7ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇದಾಜ್ಞೆಯನ್ನು ಜಾರಿ ಮಾಡಲಾಗುವುದು, ಜೆರಾಕ್ಸ್, ಸೈಬರ್ ಸೆಂಟರ್ ಅಂಗಡಿಗಳನ್ನು ಪರೀಕ್ಷಾ ದಿನದಂದು ಬೆಳಿಗ್ಗೆ 9:30 ರಿಂದ 5:30 ರವರೆಗೆ ಮುಚ್ಚುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.

ತುರ್ತು ಸಂದರ್ಭಗಳಲ್ಲಿ ಈ ಸಹಾಯವಾಣಿ ಸಂಪರ್ಕಿಸಿ; ಡಿಸಿ ಮನವಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಳಿಗೆ ಜಿಲ್ಲೆಯಲ್ಲಿ ತುಮಕೂರು, ತಿಪಟೂರು, ಶಿರಾ ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟು 26 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಒಟ್ಟು 13104 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಲ್ಲಿ ಸುಸ್ಥಿತಿಯಲ್ಲಿರುವ ಗೋಡೆ ಗಡಿಯಾರವನ್ನು ಅಳವಡಿಸಿರಬೇಕಲ್ಲದೇ ಕೇಂದ್ರಗಳಲ್ಲಿ ಸಿಸಿ ಟಿವಿಯ ಕಣ್ಗಾವಲು ಇರಬೇಕು, ಈ ಕುರಿತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.

ವರಮಹಾಲಕ್ಷ್ಮೀ ವೃತ; ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ವಿಶೇಷ ಪೂಜೆ
ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಪ್ರಥಮ ಚಿಕಿತ್ಸಾ ಕಿಟ್ ಜೊತೆಗೆ ಆರೋಗ್ಯ ಸಹಾಯಕರನ್ನು ನೇಮಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು, ಜಿಲ್ಲಾ ಮತ್ತು ತಾಲ್ಲೂಕು ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸರಬರಾಜು ಮಾಡಲು ಅವಶ್ಯಕತೆಗನುಗುಣವಾಗಿ ವಾಹನ ವ್ಯವಸ್ಥೆ ಮಾಡಿಕೊಡಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರಿನಲ್ಲಿ ಬರ್ತ್ ಡೇ ಆಚರಿಸಿಕೊಂಡ ರೈಲು!
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ರೀತಿಯ ಮೊಬೈಲ್, ವಾಚ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು. ಮಾಸ್ಕ್ ಧರಿಸಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಆಧಾರ್ ಕಾರ್ಡು, ಮತದಾರ ಗುರುತಿನ ಚೀಟಿ, ಚಾಲನಾ ಪರವಾನಗಿ ಸೇರಿದಂತೆ ತಮ್ಮ ಭಾವಚಿತ್ರವುಳ್ಳ ಯಾವುದಾದರೂ ಗುರುತಿನ ಚೀಟಿಯನ್ನು ತೆಗೆದುಕೊಂಡು ಬರಬೇಕು. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಅಭ್ಯರ್ಥಿಗಳನ್ನು ಸರಿಯಾದ ರೀತಿಯಲ್ಲಿ ತಪಾಸಣೆ ಮಾಡಿ ಕೊಠಡಿಗಳಿಗೆ ಬಿಡಬೇಕು ಈ ಕುರಿತು ಪರೀಕ್ಷಾ ಕೇಂದ್ರದ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ತುಮಕೂರು- ಜೋಗ ಜಲಪಾತ; KSRTC ವಿಶೇಷ ಟೂರ್ ಪ್ಯಾಕೇಜ್ ಘೋಷಣೆ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್, ಹೆಚ್ಚುವರಿ ಪೋಲಿಸ್ ವರಿಷ್ಟಾಧಿಕಾರಿ ಉದೇಶ್, ಶಿರಾ ತಹಸೀಲ್ದಾರ್ ಮಮತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಡಿಡಿಪಿಯು, ಜಿಲ್ಲಾ ಖಜಾನೆಯ ಉಪನಿರ್ದೇಶಕರು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

About The Author

You May Also Like

More From Author

+ There are no comments

Add yours