ತವರೂರಿನ ಮೊರೆ ಹೊತ್ತು ಬಂದ ಜಗ್ಗೇಶ್
Tumkurnews
ತುಮಕೂರು; ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರದಲ್ಲಿ ಮಾದರಿ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯಸಭಾ ಸದಸ್ಯ ಜಗ್ಗೇಶ್ ಮಂಗಳವಾರ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯಸಭಾ ಸದಸ್ಯರಾದ ಬಳಿಕ ತುಮಕೂರು ಜಿಲ್ಲೆಯನ್ನು ನೋಡಲ್ ಜಿಲ್ಲೆಯನ್ನಾಗಿಸಿಕೊಂಡಿರುವ ಅವರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಹಾಗೂ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರೊಂದಿಗೆ ಚರ್ಚಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯಗಳ್ನಾಗಿಸಿದರೆ ಗ್ರಾಮೀಣ ಪ್ರದೇಶದ ಮಕ್ಕಳು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲವಾಗಲಿದೆ. ಹಾಗಾಗಿ ಮಾಯಸಂದ್ರ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೆಂಟರ್ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರು ಕೇಳಿ ಬಂದಿದೆ. ಹಾಗಾಗಿ ಡಯಾಲಿಸಿಸ್ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.
ನಾನು ರಾಜ್ಯಸಭಾ ಸದಸ್ಯನಾದ ಬಳಿಕ ಯಾವುದಾದರು ಒಂದು ಜಿಲ್ಲೆಯನ್ನು ನೋಡಲ್ ಜಿಲ್ಲೆಯನ್ನಾಗಿ ತೆಗೆದುಕೊಳ್ಳಬೇಕಾಗಿತ್ತು. ಹಾಗಾಗಿ ನನ್ನ ತವರು ಜಿಲ್ಲೆಯನ್ನೆ ನೋಡಲ್ ಜಿಲ್ಲೆಯನ್ನಾಗಿ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದರು.




+ There are no comments
Add yours