ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಧಾರುಣ ಸಾವು

1 min read

Tumkurnews
ತುಮಕೂರು; ಇಂಡಿಕಾ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಬ್ಬಿ ತಾಲ್ಲೂಕು ಕೊಂಡ್ಲಿ ಕ್ರಾಸ್’ನಲ್ಲಿ ಅಪಘಾತ ಸಂಭವಿಸಿದ್ದು, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ನಡುವಿನಹಳ್ಳಿಯ ರಾಮಣ್ಣ(58), ನಾರಾಯಣಪ್ಪ(54), ಸಾಗರ್(23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ನಾಗರತ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಒಂದೇ‌ ಕುಟುಂಬದವರಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ತುಮಕೂರು ಕಡೆಯಿಂದ ಕೆ.ಬಿ ಕ್ರಾಸ್ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಎದುರಿನಿಂದ ಬಂದ ಕಾರಿಗೆ ಮುಖಾಮುಳಿ ಡಿಕ್ಕಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಹಾಲಿನ ಡೈರಿಗಳಲ್ಲಿ ವರ್ಷಕ್ಕೆ 1 ಕೋಟಿ ರೂ. ವಂಚನೆ! ಹೈನುಗಾರರೇ ಎಚ್ಚರ!

About The Author

You May Also Like

More From Author

+ There are no comments

Add yours