ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ಸೇರಿ ಇಬ್ಬರಿಗೆ ಜೈಲು ಶಿಕ್ಷೆ

1 min read

 

Tumkur news
ತುಮಕೂರು; ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳಿಬ್ಬರಿಗೆ ನ್ಯಾಯಾಲಯವು ತಲಾ 20 ವರ್ಷಗಳ ಕಾಲ ಜೈಲು ಶಿಕ್ಷೆಯ ತೀರ್ಪು ನೀಡಿದೆ.
ಪ್ರಕರಣ 1; ಶಿರಾ ತಾಲ್ಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಸಂದ್ರ ಗ್ರಾಮದ ಪಿಯುಸಿ ಓದುತ್ತಿದ್ದ ಬಾಲಕಿ ಮೇಲೆ ಅದೇ ಗ್ರಾಮದ ನಿವಾಸಿ ರಾಮಚಂದ್ರ ಎಂಬ ಆಟೋ ಚಾಲಕ ಅತ್ಯಾಚಾರ ಎಸಗಿದ್ದನು. ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಯನ್ನು ಪುಸಲಾಯಿಸಿ ಆಕೆ ಪಿಯುಸಿಗೆ ಹೋಗುವಾಗ ಆತನೇ ಆಟೋದಲ್ಲಿ ಕರೆದೊಯ್ಯುತ್ತಿದ್ದನು. ಸದರಿ ಆಟೋ ಚಾಲಕನಿಗೆ ಈಗಾಗಲೇ ಮದುವೆಯಾಗಿ ಮೂವರು ಮಕ್ಕಳಿದ್ದರು. ಹೀಗಿದ್ದರು ಬಾಲಕಿಯನ್ನು ಪುಸಲಾಯಿಸಿ, 22/05/2022ರಂದು ಬಾಲಕಿಯನ್ನು ಅಪಹರಿಸಿ ಅರಕೆರೆಯ ಮನೆಯೊಂದಕ್ಕೆ ಕರೆದೊಯ್ದು ಆಕೆಯನ್ನು ಬಲವಂತವಾಗಿ ಮದುವೆಯಾಗಿ ಅತ್ಯಾಚಾರ ಎಸಗಿದ್ದನು.
ಈ ಕುರಿತು ಬಾಲಕಿಯ ತಂದೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಅಧಿಕ ಜಿಲ್ಲಾ ಸತ್ರ ಪೋಕ್ಸೋ ನ್ಯಾಯಾಲಯವು ಅಪರಾಧಿ ರಾಮಚಂದ್ರನಿಗೆ 20 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ನೀಡಿದೆ.

ತುಮಕೂರು; ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ
ಪ್ರಕರಣ 2; ಮತ್ತೊಂದು ಪ್ರಕರಣದಲ್ಲಿ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀಗಲಹಳ್ಳಿ ಗ್ರಾಮದ 11 ವರ್ಷದ ಬಾಲಕಿ ಮೇಲೆ ಶಿವಣ್ಣ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಸಂದ್ಯಾರಾವ್ ತೀರ್ಪು ನೀಡಿದ್ದಾರೆ‌. ಎರಡೂ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ.ಎಸ್ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದರು.

You May Also Like

More From Author

+ There are no comments

Add yours