ತುಮಕೂರು; 8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

1 min read

Tumkurnews
ತುಮಕೂರು; ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು 100 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ 11 ವಿಧಾನಸಭೆ ಕ್ಷೇತ್ರಗಳ ಪೈಕಿ ತುಮಕೂರು ನಗರ, ತುಮಕೂರು ಗ್ರಾಮಾಂತರ ಹಾಗೂ ಗುಬ್ಬಿ ವಿಧಾನಸಭೆ ಕ್ಷೇತ್ರಗಳನ್ನು ಹೊರತು ಪಡಿಸಿ ಉಳಿದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಅಭ್ಯರ್ಥಿಗಳ ಪಟ್ಟಿ;
ತಿಪಟೂರು- ಕೆ.ಷಡಕ್ಷರಿ, ಚಿಕ್ಕನಾಯಕನಹಳ್ಳಿ- ಕಿರಣ್ ಕುಮಾರ್, ತುರುವೇಕೆರೆ- ಬೆಮೆಲ್ ಕಾಂತರಾಜು, ಶಿರಾ- ಟಿ.ಬಿ ಜಯಚಂದ್ರ, ಪಾವಗಡ- ಎಚ್.ವಿ ವೆಂಕಟೇಶ್, ಕೊರಟಗೆರೆ- ಡಾ.ಜಿ ಪರಮೇಶ್ವರ್, ಮಧುಗಿರಿ- ಕೆ.ಎನ್ ರಾಜಣ್ಣ, ಕುಣಿಗಲ್- ಡಾ. ಎಚ್.ಡಿ ರಂಗನಾಥ್ ಹೆಸರು ಪಟ್ಟಿಯಲ್ಲಿದೆ.

3 ಕ್ಷೇತ್ರ ಗೊಂದಲ; ತುಮಕೂರು ನಗರ, ತುಮಕೂರು ಗ್ರಾಮಾಂತರ ಹಾಗೂ ಗುಬ್ಬಿ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ. ಈ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ಪೈಪೋಟಿ ಜೋರಾಗಿರುವುದರಿಂದ ಬಂಡಾಯ ಶಮನಗೊಳಿಸಿದ ಬಳಿಕ 2ನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಜನತೆ ಎದುರು ನೋಡುತ್ತಿದ್ದಾರೆ.

About The Author

You May Also Like

More From Author

+ There are no comments

Add yours