36,272
Tumkurnews.in
ಕೊರಟಗೆರೆ; ಕಡ್ಡಾಯ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅನ್ನು ಅಡ್ಡಗಟ್ಟಿ ಚಾಲಕನನ್ನು ಶಿಕ್ಷಣ ಸಚಿವರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ರಾಜ್ಯ ಹೆದ್ದಾರಿಯಲ್ಲೇ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ವಿದ್ಯಾರ್ಥಿಗಳಿಗೆ ಬಸ್ಸು ನಿಲ್ಲಿಸದ ಚಾಲಕನನ್ನು ತರಾಟೆಗೆ ತೆಗೆದುಕೊಂಡು, ಬಸ್ ನಿಲ್ಲಿಸುವಂತೆ ಚಾಲಕನಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬೆಂಗಳೂರಿನಿಂದ ದಾಬಸ್ ಪೇಟೆ ಹಾಗೂ ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ತೆರಳುತ್ತಿದ್ದರು, ಮಧುಗಿರಿಯಲ್ಲಿ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಾಲಾಕಾಲೇಜಿಗೆ ತೆರಳಲು ಅನುಕೂಲ ಆಗುವಂತೆ ಸಾರಿಗೆ ಸಚಿವರ ಜತೆ ಚರ್ಚಿಸಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ.