web analytics
My page - topic 1, topic 2, topic 3
ದೂರ ತರಂಗ ಶಿಕ್ಷಣ ಇಡೀ ರಾಜ್ಯಕ್ಕೆ ವಿಸ್ತಾರವಾಗಲಿ; ಇನ್ಫೋಸಿಸ್ ಗೆ  ಸಚಿವ ಸುರೇಶ್ ಕುಮಾರ್ ಮನವಿ

ದೂರ ತರಂಗ ಶಿಕ್ಷಣ ಇಡೀ ರಾಜ್ಯಕ್ಕೆ ವಿಸ್ತಾರವಾಗಲಿ; ಇನ್ಫೋಸಿಸ್ ಗೆ ಸಚಿವ ಸುರೇಶ್ ಕುಮಾರ್ ಮನವಿ

 918 

Tumkurnews.in

ಮಧುಗಿರಿ; ದೂರ ತರಂಗ ಶಿಕ್ಷಣ ಕಾರ್ಯಕ್ರಮ ಇಡೀ ರಾಜ್ಯಕ್ಕೆ ವಿಸ್ತರಿಸುವಂತಾಗಲಿ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಆಶಯ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ದೂರ ತರಂಗ ಶಿಕ್ಷಣ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಧುಗಿರಿಯಲ್ಲಿ ಬೀದಿ ನಾಯಿಗಳ ಉಪಟಳ; ಹೆಚ್ಚಿದ ವಾಹನ ಅಪಘಾತ
ಈ ಯೋಜನೆ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಜಾರಿಯಾಗುತ್ತಿದ್ದು, ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವಂತೆ ಎನ್.ಆರ್ ನಾರಾಯಣಮೂರ್ತಿ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.
ಕೊರೋನಾದಿಂದಾಗಿ ವಿದ್ಯಾರ್ಥಿಗಳು ಭಯಭೀತರಾಗಿದ್ದು, ಹಿರಿಯರು ಅವರಲ್ಲಿ ಅತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು, ಈ ಕಾಯಿಲೆಯ ವಿರುದ್ಧ ಮಾಸ್ಕ್, ಸ್ಯಾನಿಟೈಸರ್ ಹಾಗೂ ಶಾರೀರಿಕ ಅಂತರ ಕಾಪಾಡುವ ಮೂಲಕ ಹೋರಾಡೋಣ ಎಂದರು.

ಕೊರಟಗೆರೆ; ಕೆಎಸ್ಸಾರ್ಟಿಸಿ ಬಸ್ ಅಡ್ಡಗಟ್ಟಿ ಚಾಲಕನನ್ನು ತರಾಟೆ ತೆಗೆದುಕೊಂಡ ಸಚಿವ ಸುರೇಶ್ ಕುಮಾರ್; ಯಾಕೆ, ಏನಾಯ್ತು?
ನಾನು ಶಿಕ್ಷಣ ಸಚಿವನಲ್ಲ, ಇಡೀ ರಾಜ್ಯದ ವಿದ್ಯಾರ್ಥಿಗಳಿಗೆ ಪೋಷಕನಾಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣ ಸುಲಭವಾಗಿ ಸಿಗುತ್ತಿದ್ದು, ಸರಕಾರಿ ಶಾಲೆಗಳ ಮಕ್ಕಳಿಗೆ ಗಗನ ಕುಸುಮವಾಗಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಕೂಡ ಅನುಕೂಲವಾಗಲಿದೆ ಎಂದು ತಿಳಿಸಿದರು.
ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್ ನಾರಾಯಣಮೂರ್ತಿ ವರ್ಚುವಲ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ ಕಟ್ಟಬಹುದು, ವಿದ್ಯಾವಂತರು ಜ್ಞಾನ ಸಂಪತ್ತು ಹೊಂದಿದ್ದು, ಉತ್ತಮ ಚಿಂತನೆಗಳ ಮೂಲಕ ಈ ದೇಶವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯೊತ್ತಾರೆ ಎಂದು ನಾರಾಯಣ ಮೂರ್ತಿ ತಿಳಿಸಿದರು.
ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಮಾತನಾಡಿ, ನಾರಾಯಣ ಮೂರ್ತಿ ದಂಪತಿಗಳು ಸ್ವಾರ್ಥವಿಲ್ಲದ ಸಾಧಕರಾಗಿದ್ದು, ಅವರ ಜೀವನಕಥೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸುವಂತೆ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದರು.

ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್; ಸಚಿವ ಸುರೇಶ್ ಕುಮಾರ್ ಮಾಹಿತಿ
ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಸ್ವಾಮಿ ಜಪಾನಂದ ಜೀ ಮಾತನಾಡಿ, ನಾರಾಯಣ ಮೂರ್ತಿಯವರು ಶಿಕ್ಷಣ ಪಡೆದಂತಹ ಈ ಶಾಲೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಇನ್ಫೋಸಿಸ್ ಸಮರ್ಪಣಾ ತಂಡವು ದುಡಿಮೆಯ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಟ್ಟಿರುವುದು ಶ್ಲಾಘನೀಯ. ಮೂರ್ತಿ ದಂಪತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವುದು ಮುಂದಿನ ಪೀಳಿಗೆಗೆ ಮಾದರಿಯಾಗಲಿ ಎಂದು ತಿಳಿಸಿದರು.

ಮಧುಗಿರಿ ಪುರಸಭೆಯ ಪ್ರಥಮ ಸಾಮಾನ್ಯ ಸಭೆ; ಅಧ್ಯಕ್ಷ ತಿಮ್ಮರಾಜು ಏನೇನು ಮಾತನಾಡಿದರು ಗೊತ್ತೇ?
ಇನ್ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಗುರುರಾಜ್ ದೇಶಪಾಂಡೆ ಮಾತನಾಡಿದರು.
ಉಪವಿಭಾಗಾಧಿಕಾರಿ ಸೋಮಪ್ಪ ಇ.ಎಂ.ಕಡಕೋಳ್, ಡಿಡಿಪಿಐ ಎಂ.ರೇವಣ್ಣ ಸಿದ್ದಪ್ಪ, ಬಿಇಒ ನಂಜುಂಡಯ್ಯ, ಡಿವೈಎಸ್‌ಪಿ ಎಂ.ಪ್ರವೀಣ್, ತಹಸೀಲ್ದಾರ್ ಡಾ.ಜಿ.ವಿಶ್ವನಾಥ್, ಸಮಗ್ರ ಶಿಕ್ಷಣ ಯೋಜನೆ ನಿರ್ದೇಶಕ ಗೋಪಾಲಕೃಷ್ಣ, ಡಯೇಟ್ ಪ್ರಾಂಶುಪಾಲರಾದ ವೈ.ಎನ್ ರಾಮಕೃಷ್ಣಯ್ಯ, ಮಂಜುನಾಥ್, ಪಿಯು ಡಿ.ಡಿ ನರಸಿಂಹಮೂರ್ತಿ, ಶಿಕ್ಷಕ ವೃಂದದವರು ಹಾಜರಿದ್ದರು.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: [email protected] ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!