web analytics
My page - topic 1, topic 2, topic 3
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ತುಮಕೂರು, ಗುಬ್ಬಿ, ಪಾವಗಡದಲ್ಲಿ ಕೆಲಸ; 20K ಸಂಬಳ; ಇಂದೇ ಅರ್ಜಿ ಸಲ್ಲಿಸಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ; ತುಮಕೂರು, ಗುಬ್ಬಿ, ಪಾವಗಡದಲ್ಲಿ ಕೆಲಸ; 20K ಸಂಬಳ; ಇಂದೇ ಅರ್ಜಿ ಸಲ್ಲಿಸಿ

 2,726 

Tumkurnews.in
ತುಮಕೂರು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ ಗುಬ್ಬಿ, ಪಾವಗಡ ಹಾಗೂ ತುಮಕೂರು(ನಗರ) ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ತಾಲೂಕು ಯೋಜನಾ ಸಂಯೋಜಕ ಹುದ್ದೆಗಳನ್ನು ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಹೊಂದಿದ್ದು, 2 ವರ್ಷಗಳ ಅನುಭವ ಹೊಂದಿರಬೇಕು. ಆಯ್ಕೆಯಾದವರಿಗೆ ಮಾಹೆಯಾನ 20 ಸಾವಿರ ರೂ.ಗಳ ಗೌರವ ಧನ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜ. 25ರೊಳಗಾಗಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: [email protected] ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!