ಅಪರಿಚಿತ ವ್ಯಕ್ತಿ ಸಾವು
Tumkurnews
ತುಮಕೂರು; ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ಹೆಚ್.ರಸ್ತೆ ಸೆಲ್ ಪೆಟ್ರೋಲ್ ಬಂಕ್ ಬಳಿ ಮೇ 14ರಂದು ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ದೂರು ದಾಖಲಾಗಿದೆ.
ಮೃತನ ವಿಳಾಸ ತಿಳಿದು ಬಂದಿರುವುದಿಲ್ಲ. ಮೃತ ವ್ಯಕ್ತಿಯು 160 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಕಪ್ಪು ಮೈಬಣ್ಣ ಹೊಂದಿರುತ್ತಾನೆ. ಈತನ ಬಗ್ಗೆ ಮಾಹಿತಿ ತಿಳಿದವರು ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours