web analytics
My page - topic 1, topic 2, topic 3
ಸಂಪುಟ ವಿಸ್ತರಣೆ ಬಗ್ಗೆ ತುಮಕೂರಿನಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವತ್ರಯರು; ಯಾರು, ಏನಂದರು?

ಸಂಪುಟ ವಿಸ್ತರಣೆ ಬಗ್ಗೆ ತುಮಕೂರಿನಲ್ಲಿ ಮಹತ್ವದ ಮಾಹಿತಿ ನೀಡಿದ ಸಚಿವತ್ರಯರು; ಯಾರು, ಏನಂದರು?

 300 

Tumkurnews.in
ತುಮಕೂರು; ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗೆ ಬಿಟ್ಟದ್ದು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಮ್ಮಲ್ಲಿಗೆ ಪಕ್ಷ ತೊರೆದು ಬಂದವರಿಗೆ ಖಂಡಿತ ತೃಪ್ತಿಯಾಗಲಿದೆ. ನಮ್ಮ ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಈ ಕುರಿತು ಸಿಎಂ ಸಂಪೂರ್ಣ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮತ್ತೋರ್ವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ನಾಳೆ(ಬುಧವಾರ) ಸಂಜೆ 3.50 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಗೊತ್ತಾಗುತ್ತದೆ, ಸಿಎಂ ನಾಳೆ ಬೆಳಗ್ಗೆ 9.30ಕ್ಕೆ ಹೇಳುತ್ತಾರೆ, ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆ, ಯಾರನ್ನು ಬಿಡುತ್ತಾರೆ ಎನ್ನುವುದು ಬುಧವಾರ ಬೆಳಗ್ಗೆ ಗೊತ್ತಾಗುತ್ತದೆ ಎಂದರು.
ಸಚಿವ ಬಿ.ಶ್ರೀರಾಮುಲು ಮಾತನಾಡಿ, ಒಟ್ಟು 7 ಮಂದಿಗೆ ಸಚಿವ ಸ್ಥಾನದ ಅವಕಾಶ ಕೊಡುವುದಾಗಿ ಸಿಎಂ ಹೇಳಿದ್ದಾರೆ. ಆ 7 ಮಂದಿಯಲ್ಲಿ ಇಂತವರಿಗೆ ಅವಕಾಶ ಕೊಡಬೇಕು ಎಂದು ಪಕ್ಷ ತೀರ್ಮಾನಕ್ಕೆ ಬರುತ್ತದೆ, ನಾಳೆ ನಾಡಿದ್ದರಲ್ಲಿ ಮತ್ತೆ ಸಿಎಂ ಜೊತೆ ಚರ್ಚೆ ಮಾಡ್ತೇವೆ. ಯಾರಿಗೆ ಕೊಡಬೇಕು ಎಂಬುದು ಸಿಎಂ ಹಾಗೂ ರಾಷ್ಟ್ರೀಯ ನಾಯಕರಿಗೆ  ಬಿಟ್ಟ ವಿಚಾರ ಎಂದು ತಿಳಿಸಿದರು.
ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದವರಿಗೆ ಅವಕಾಶ ನೀಡಬೇಕಾಗುತ್ತದೆ. ನಮ್ಮ ಪಾರ್ಟಿಯಲ್ಲಿರುವ ಸೀನಿಯರ್ ಲೀಡರ್ ಗಳು ಅವಕಾಶ ಮಾಡಿಕೊಡಬೇಕಾಗುತ್ತದೆ,
ಹಾಗಾಗಿ ಅವರು ಅವಕಾಶ ಮಾಡಿಕೊಡುವ ಕೆಲಸ ಮಾಡಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ರೀತಿಯಲ್ಲಿ ಈ ಮೂವರು ಸಚಿವರುಗಳು ಬುಧವಾರ ನಡೆಯಲಿರುವ ಸಂಭಾವ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗ ಪಡಿಸಿದರು.
ಇದೇ ವೇಳೆ ನಡೆದ ಜನ ಸೇವಕ ಸಮಾವೇಶದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ಶಾಸಕರುಗಳಾದ ಜಿ.ಬಿ ಜ್ಯೋತಿಗಣೇಶ್, ಮಸಾಲೆ ಜಯರಾಂ, ಡಾ.ರಾಜೇಶ್ ಗೌಡ ಮತ್ತಿತರರಿದ್ದರು.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: [email protected] ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!