ಅಣಬೆ ಬೇಸಾಯ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

1 min read

ಅಣಬೆ ಬೇಸಾಯ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

Tumkurnews
ತುಮಕೂರು; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಗಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಆಗಸ್ಟ್ 02 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9113880324, 9740982585, 8884554510, 9241482541ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

You May Also Like

More From Author

+ There are no comments

Add yours