ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

1 min read

ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
Tumkurnews
ತುಮಕೂರು; 2023-24ನೇ ಶೈಕ್ಷಣಿಕ ಸಾಲಿಗೆ ತುಮಕೂರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪಿ.ಯು.ಸಿ ನಂತರದ ಕೋರ್ಸುಗಳಿಗೆ ಪ್ರವೇಶಾತಿ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ವರ್ಗದವರಿಗೆ ಶೇ.75ರಷ್ಟು ಸ್ಥಾನಗಳು ಮೀಸಲಿದ್ದು, ಶೇ.25ರಷ್ಟು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಕ್ಕೆ ಮೀಸಲಿಡಲಾಗಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 16, 2023 ಕೊನೆಯ ದಿನವಾಗಿದ್ದು, ಆಗಸ್ಟ್ 21ರಂದು ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಆಗಸ್ಟ್ 25ರಂದು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಬಹುದು. ಅರ್ಜಿಯನ್ನು ಜಾಲತಾಣ https://shp.karnataka.gov.in ಮೂಲಕ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು ಮುಂಭಾಗ, ಉಪ್ಪಾರಹಳ್ಳಿ, ತುಮಕೂರು, ದೂರವಾಣಿ ಸಂಖ್ಯೆ: 0816-2273724ನ್ನು ಸಂಪರ್ಕಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

About The Author

You May Also Like

More From Author

+ There are no comments

Add yours