ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ; ಇಲ್ಲಿದೆ ಕಚೇರಿ ವಿಳಾಸ

1 min read

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ; ಎಲ್ಲಿದೆ ಕಚೇರಿ?

Tumkurnews
ತುಮಕೂರು; ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಅವರು ಗುರುವಾರ ತಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಮೊದಲನೇ ಮಹಡಿಯ ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಯ ಪಕ್ಕದಲ್ಲಿ ನೂತನವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ತೆರೆಯಲಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಹಾಜರಿದ್ದರು.

About The Author

You May Also Like

More From Author

+ There are no comments

Add yours