1,567
Tumkurnews.in
ಶಿರಾ; ಚಾಲಕನ ನಿಯಂತ್ರಣ ತಪ್ಪಿ ಮದುವೆ ದಿಬ್ಬಣದ ಬಸ್ ಉರುಳಿ ಬಿದ್ದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿರಾ ತಾಲೂಕು ಮೇಕೇರಹಳ್ಳಿ ಬಳಿ ಘಟನೆ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ತೋವಿನಕೆಯಲ್ಲಿ ಮದುವೆ ಮುಗಿಸಿಕೊಂಡು ತೆರಳುವಾಗ ಘಟನೆ ಸಂಭವಿಸಿದೆ. ಶಿರಾ ತಾಲ್ಲೂಕಿನ ಮಾಳಿಗೆಹಟ್ಟಿ ವಧುವಿಗೆ ಕೊರಟಗೆರೆ ತಾಲ್ಲೂಕಿನ ತೋವಿನಕೆರೆಯ ಯುವಕನೊಂದಿಗೆ ಇಂದು ವಿವಾಹ ನಡೆದಿತ್ತು.
ವರನ ಕುಟುಂಬಸ್ಥರು ವಧುವಿನ ಮನೆಗೆ ತೆರಳುವಾಗ ಅವಘಡ ನಡೆದಿದೆ. ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.