1,040
Tumkurnews.in
ತುಮಕೂರು; ನೆಲಮಂಗಲ ತಾಲ್ಲೂಕಿನ ಅರಿಶಿನ ಕುಂಟೆ ರುಡ್ಸೆಟ್ ಸಂಸ್ಥೆಯಿಂದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ವ್ಯಾಪ್ತಿಗೊಳಪಡುವ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ವಸತಿಯುತ 30 ದಿನಗಳ ಬ್ಯೂಟಿಪಾರ್ಲರ್ ತರಬೇತಿಯನ್ನು ಫೆ. 24ರಿಂದ ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವರ್ಷ ವಯೋಮಿತಿಯ ಕನ್ನಡ ಓದಲು ಮತ್ತು ಬರೆಯಲು ಬಲ್ಲ ಅಭ್ಯರ್ಥಿಗಳು ಫೆ.24ರೊಳಗೆ ನೆಲಮಂಗಲ ತಾಲ್ಲೂಕಿನ ಅರಿಶಿನ ಕುಂಟೆ ರುಡ್ಸೆಟ್ ಸಂಸ್ಥೆಯಲ್ಲಿ ಖುದ್ದಾಗಿ ಅಥವಾ ದೂರವಾಣಿ ಮೂಲಕ ಖಾತರಿಪಡಿಸಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಇದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂ.ವಾ.ಸಂ 080-27728166ನ್ನು ಸಂಪರ್ಕಿಸಬೇಕಾಗಿದೆ ಎಂದು ಪ್ರಕಟಣೆ ತಿಳಿಸಿದೆ.