web analytics
My page - topic 1, topic 2, topic 3
ಎಚ್.ಡಿ ದೇವೇಗೌಡ, ಕುಮಾರಸ್ವಾಮಿ ನಾಳೆ ತುಮಕೂರಿಗೆ; ಸಿದ್ದತೆ ಪರಿಶೀಲಿಸಿದ ಶಾಸಕ ಗೌರಿಶಂಕರ್

ಎಚ್.ಡಿ ದೇವೇಗೌಡ, ಕುಮಾರಸ್ವಾಮಿ ನಾಳೆ ತುಮಕೂರಿಗೆ; ಸಿದ್ದತೆ ಪರಿಶೀಲಿಸಿದ ಶಾಸಕ ಗೌರಿಶಂಕರ್

 2,273 

Tumkurnews.in
ತುಮಕೂರು; ತಾಲ್ಲೂಕಿನ ಹೊನ್ನುಡಿಕೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹೊನ್ನೇನಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಹಾಗೂ ನೂತನ ವಿಮಾನ ಗೋಪುರ ಕಳಶ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆಎಂದು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ತಿಳಿಸಿದರು.
ಹೊನ್ನೇನಹಳ್ಳಿ ಗ್ರಾಮದ ಭೂನೀಳಾ ಮನೋಹರ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಸಂಪ್ರೋಕ್ಷಣೆ, ನೂತನ ವಿಮಾನ ಗೋಪುರ ಕಳಶ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಕಾರ್ಯಕ್ರಮದ ರೂಪುರೇಷೆಯನ್ನು ಪರಿಶೀಲಿಸಿ ಮಾತನಾಡಿದರು.
ಗ್ರಾಮಸ್ಥರ ಸಹಕಾರ ಹಾಗೂ ವೈಯಕ್ತಿಕವಾಗಿ ದೇಗುಲ ಜೀರ್ಣೋದ್ಧಾರಕ್ಕೆ ಸಹಾಯ ಮಾಡಿದ್ದು, ಗ್ರಾಮಸ್ಥರ ಆಪೇಕ್ಷೆಯಂತೆ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರಿಂದ ದೇಗುಲವನ್ನು ಉದ್ಘಾಟಿಸಲಾಗುತ್ತಿದೆ ಎಂದರು.
ಫೆ.24ರಂದು ಮಧ್ಯಾಹ್ನ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಆದಿಚುಂಚನಗಿರಿ ಕ್ಷೇತ್ರದ ನಿರ್ಮಲಾನಂದ ಮಹಾಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ಪೀಠಾಧ್ಯಕ್ಷ ನಂಜಾವಧೂತ ಮಹಾಸ್ವಾಮೀಜಿ, ಯದುಗಿರಿ ಯತಿರಾಜ ಮಠದ ತಿರುನಾರಾಯಣ ರಾಮಾನುಜ ಜೀಯರ್ ಮಹಾಸ್ವಾಮಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ ಲಕ್ಷ್ಮೀರಂಗನಾಥ ಸ್ವಾಮಿಯವರ ತಿರುಕಲಾಣ್ಯೋತ್ಸವ ನಡೆಯಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜು, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಎಂ.ವಿ ವೀರಭದ್ರಯ್ಯ, ಸುರೇಶ್‍ಗೌಡ, ಕೆ.ಎಂ.ಶಿವಲಿಂಗೇಗೌಡ, ಆರ್.ಮಂಜುನಾಥ್, ಪ್ರಮುಖರಾದ ಡಿ.ನಾಗರಾಜಯ್ಯ, ಆರ್.ಚೌಡರೆಡ್ಡಿ ತೂಪಲ್ಲಿ, ಎಚ್.ನಿಂಗಪ್ಪ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‍ಬಾಬು, ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!