web analytics
My page - topic 1, topic 2, topic 3
Featured Video Play Icon

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು; ಮಾನವೀಯತೆ ಮೆರೆದ ಡಾ.ಜಿ ಪರಮೇಶ್ವರ್

Listen to this article


iSpeech.org

Tumkurnews.in
ಕೊರಟಗೆರೆ; ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಸಂತೈಸಿ, ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ ಪರಮೇಶ್ವರ್ ಮಾನವೀಯತೆ ಮೆರೆದಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಸಿ.ಎನ್ ದುರ್ಗಾ ಹೋಬಳಿಯ ತುಂಬಾಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತು.
ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಯಾರದ್ದಾದರೂ ಸಹಾಯದ ನಿರೀಕ್ಷೆಯಲ್ಲಿದ್ದರು.
ಅದೇ ಸಮಯದಲ್ಲಿ ಆ ಮಾರ್ಗದಲ್ಲಿ ಬಂದ ಡಾ.ಜಿ ಪರಮೇಶ್ವರ್ ಅವರು ಅಪಘಾತದಲ್ಲಿ ಗಾಯಗೊಂಡವರನ್ನು ಗಮನಿಸಿದ್ದು, ಕೂಡಲೇ ತಮ್ಮ ಕಾರಿನಿಂದ ಇಳಿದು ನೆರವಿಗೆ ಧಾವಿಸಿದ್ದಾರೆ.
ಕಾರ್ಯನಿಮಿತ್ತ ಮಧುಗಿರಿಗೆ ತೆರಳುತ್ತಿದ್ದ ಡಾ.ಜಿ ಪರಮೇಶ್ವರ್, ಅಪಘಾತಕ್ಕೆ ಒಳಗಾದ ಕಾರನ್ನು ಗಮನಿಸಿ, ಗಾಯಾಳುಗಳನ್ನು ಮಾತನಾಡಿಸಿ, ಸಂತೈಸಿದ್ದಾರೆ. ಅಲ್ಲದೇ ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಡಾ.ಜಿ ಪರಮೇಶ್ವರ್ ಅವರ ಈ ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಈ ಸಂದರ್ಭದಲ್ಲಿ ಚಂದ್ರಶೇಖರ ಗೌಡ, ದಿನೇಶ್, ಗೋಪಿ ಮತ್ತಿತರರಿದ್ದರು.

ತುಮಕೂರುನ್ಯೂಸ್.ಇನ್ ವಾಟ್ಸ್ ಆಪ್ ನಂಬರ್ :+91 9148215339 ಇಮೇಲ್: tumkurnews.in@gmail.com ವೆಬ್ ಸೈಟ್ : https://www.tumkurnews.in/

Leave a Reply

Your email address will not be published. Required fields are marked *

error: Content is protected !!