ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

1 min read

 

 

 

 

 

ಕಾವೇರಿ‌ ನದಿ ನೀರು ಹಂಚಿಕೆ ಕುರಿತು ಇಂದು ಕರ್ನಾಟಕ ರಾಜ್ಯ ರೈತ ಸಂಘದವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

Tumkurnews
ತುಮಕೂರು: ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ, ಹಾಗೂ ಪ್ರತಿಬಾರಿಯೂ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾದರೂ ತುಟಿ ಬಿಚ್ಚದ ರಾಜ್ಯದ ಸಂಸದರ ಕ್ರಮವನ್ನು ಖಂಡಿಸಿ, ಒಕ್ಕೂಟ ಸರಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಬಂದ್’ಗೆ ತುಮಕೂರಿನಲ್ಲಿ ಯಾರ್ಯಾರ ಬೆಂಬಲ?: ಹೇಗಿರುತ್ತೆ ಬಂದ್? ಇಲ್ಲಿದೆ ಮಾಹಿತಿ
ನಗರದ ಟೌನ್‍ಹಾಲ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತುಮಕೂರು ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ಅವರ ನೇತೃತ್ವದಲ್ಲಿ ಸಮಾವೇಶಗೊಂಡ ರೈತ ಸಂಘದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರಕಾರದ ರೈತವಿರೋಧಿ, ಜನವಿರೋಧಿ ನೀತಿಯನ್ನು ಖಂಡಿಸಿ, ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೆಲ ಕಾಲ ಡಿಸಿ ಕಚೇರಿ ಎದುರು ಧರಣಿ ನಡೆಸಿ, ಮನವಿ ಸಲ್ಲಿಸಿದರು.

ಕರ್ನಾಟಕ ಬಂದ್: ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್, ತಾಲೂಕು ಘಟಕದ ಅಧ್ಯಕ್ಷ ಚಿಕ್ಕಬೋರೇಗೌಡ, ಯುವಘಟಕದ ಅಧ್ಯಕ್ಷ ಚಿಕ್ಕಣ್ಣ, ತಾಲೂಕು ಕಾರ್ಯದರ್ಶಿ ತಿಮ್ಮೇಗೌಡ, ಯುವಘಟಕದ ಜಿಲ್ಲಾ ಸಂಚಾಲಕ ಮಹೇಶ್, ಮುಖಂಡರಾದ ಕೃಷ್ಣಪ್ಪ, ನಾರಾಯಣಪ್ಪ, ರಂಗಸ್ವಾಮಯ್ಯ, ಮೋಹನ್, ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಶಾಲಾ ಕಾಲೇಜುಗಳಲ್ಲಿ ರಜೆ ಇಲ್ಲ: ಜಿಲ್ಲಾಧಿಕಾರಿ ಮಾಹಿತಿ

You May Also Like

More From Author

+ There are no comments

Add yours