ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಸರ್ಕಾರ
ಬೆಂಗಳೂರು: ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ.5ರಿಂದ 13ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ.
ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅ.5ರಿಂದ 7ರವರೆಗೆ, ಕಲಬುರಗಿ ವಲಯದಲ್ಲಿ ಅ.8ರಿಂದ 10ರವರೆಗೆ ಮತ್ತು ಬೆಳಗಾವಿ ವಲಯದಲ್ಲಿ ಅ.11ರಿಂದ 13ರವರೆಗೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ರದ್ದು ಮತ್ತು ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿಕೊಳ್ಳಬಹುದು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ 7 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸೆ.9ರಿಂದ 14ರವರೆಗೆ ಆಹಾರ ಇಲಾಖೆಯು ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿತ್ತು.
ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರದ 3 ತಂಡ ಅಗಮನ: ನಾಳೆಯಿಂದ 4 ದಿನ ರಾಜ್ಯ ಪ್ರವಾಸ: ಇಲ್ಲಿದೆ ಲಿಸ್ಟ್
+ There are no comments
Add yours