ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

1 min read

 

 

 

 

 

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Tumkurnews
ತುಮಕೂರು; ಕಲ್ಬುರ್ಗಿಯ ಸಿಂಚೋಳಿ ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಚೋಳಿ ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಎಂಬುವರು ಸಚಿವ ಡಾ. ಶರಣಪ್ರಕಾಶ್ ಅವರ ಹೆಸರೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದರು.
ಈ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆ ಎಂದು ಕೆಲವರು ಹೇಳಿಕೆ ಕೊಡುತ್ತಿದ್ದಾರೆ. ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆ ವ್ಯಕ್ತಿ ತಮಗೆ ಗೊತ್ತಿಲ್ಲ ಎಂದು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೂ ಸಮಗ್ರ ತನಿಖೆಯಾಗಲಿ ಎಂಬ ಉದ್ದೇಶದಿಂದ ಸಿಐಡಿಗೆ ಈ ಪ್ರಕರಣವನ್ನು ವಹಿಸಲಾಗುತ್ತಿದೆ. ಈ ಪ್ರಕರಣ ಕುರಿತು ತನಿಖೆ ವರದಿ ಬಂದ ನಂತರ ಸತ್ಯಾಂಶ ಹೊರ ಬರಲಿದೆ ಎಂದು ಅವರು ತಿಳಿಸಿದರು.

ಗೃಹಲಕ್ಷ್ಮಿ ಎರಡನೇ ಕಂತಿನ ಹಣ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ

You May Also Like

More From Author

+ There are no comments

Add yours