ದಸರಾ ಆಚರಣೆಗೂ ಹಲವು ಷರತ್ತುಗಳು: ಅನುಮತಿ ಪಡೆಯದಿದ್ರೆ ಬೀಳುತ್ತೆ ಕೇಸ್! ಇಲ್ಲಿದೆ ವಿವರ 

1 min read

 

 

 

 

 

ದಸರಾ ಆಚರಣೆಗೆ ಹಲವು ಕಂಡೀಶನ್ಸ್: ಅನುಮತಿ ಪಡೆಯದಿದ್ರೆ ಬೀಳುತ್ತೆ ಕೇಸ್: 

Tumkurnews
ತುಮಕೂರು: ದಸರಾ ಹಬ್ಬ ಆಚರಣೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಸಾರ್ವಜನಿಕವಾಗಿ ತೊಂದರೆಯುಂಟಾಗದಂತೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಅನುಸರಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆಯೋಜಕರಿಗೆ ಸೂಚಿಸಿದ್ದಾರೆ.

ಗೃಹಲಕ್ಷ್ಮಿ ಎರಡನೇ ಕಂತಿನ ಹಣ ಬಿಡುಗಡೆ ಯಾವಾಗ? ಇಲ್ಲಿದೆ ಮಾಹಿತಿ
ಜಿಲ್ಲಾ ವ್ಯಾಪ್ತಿಯಲ್ಲಿ ಹಬ್ಬ ಆಚರಿಸುವ ಸಂದರ್ಭದಲ್ಲಿ ಆಯೋಜಕರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳದ ಮಾಲೀಕರು ಹಾಗೂ ಇಲಾಖೆಗಳಿಂದ ಅನುಮತಿ ಪಡೆಯುವುದು. ದಸರಾ ಹಬ್ಬದ ಹಿನ್ನೆಲೆಯಲ್ಲಿ ನಡೆಸುವ ಮೆರವಣಿಗೆಗೆ ಸಂಬಂಧಪಟ್ಟ ಪೊಲೀಸ್ ಠಾಣೆ, ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು. ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಸರ್ಕಾರದ ಮಾರ್ಗಸೂಚಿ ಮತ್ತು ನಿಯಮಾವಳಿಗಳನ್ನು ಪಾಲಿಸಬೇಕು.
ಸಿಡಿಮದ್ದು ಉಪಯೋಗಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಾವಳಿಯನ್ನು ಪಾಲಿಸುವುದು. ದಸರಾ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಸಾರ್ವಜನಿಕವಾಗಿ ದಸರಾ ಹಬ್ಬವನ್ನು ಆಚರಣೆ ಮಾಡಲು ಆಯೋಜಕರು ಕ್ರಮವಹಿಸಬೇಕು.

ಪಿಡಿಓಗಳಿಗೆ ಅಮಾನತ್ತಿನ ಎಚ್ಚರಿಕೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್: ಯಾಕೆ? ಏನಾಯ್ತು?
ಕಾರ್ಯಕ್ರಮದ ಆಯೋಜಕರು ಸಂಬಂಧಪಟ್ಟ ಇಲಾಖೆಗಳ ಪೂರ್ವಾನುಮತಿಯನ್ನು ಪಡೆಯದೇ ಯಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡತಕ್ಕದ್ದಲ್ಲ. ತಪ್ಪಿದಲ್ಲಿ ಸಂಬಂಧಪಟ್ಟ ಆಯೋಜಕರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು. ಸಾರ್ವಜನಿಕವಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ಸಿಬ್ಬಂದಿಗಳ ಸೇವೆಯನ್ನು ಪಡೆಯಲು ಆಯೋಜಕರು ಕ್ರಮ ವಹಿಸುವುದು. ಭದ್ರತಾ ದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಪಡೆದುಕೊಳ್ಳುವುದು, ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮದ ಆಯೋಜನೆಯ ಬಗ್ಗೆ ಸಂಪೂರ್ಣವಾಗಿ ಜವಾಬ್ದಾರಿಯನ್ನು ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಗಾಂಜಾ ಇದೆ ಎಂದು ಭಿಕ್ಷುಕನ ಬ್ಯಾಗ್ ಚೆಕ್ ಮಾಡಿದ ಪೊಲೀಸರಿಗೆ ಕಾದಿತ್ತು‌ ಶಾಕ್! ಬೆಚ್ಚಿ ಬಿದ್ದ ಜನ: ವಿಡಿಯೋ

ಸದ್ಯ ಇದು ತುಮಕೂರು ಜಿಲ್ಲೆಯಲ್ಲಿ ಹೊರಡಿಸಿರುವ ಸೂಚನೆಯಾದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುತ್ತದೆ. ದಸರಾವನ್ನು ಶಾಂತಿಯುತವಾಗಿ ಆಚರಿಸಲ ಸರ್ಕಾರ ಈ ಕ್ರಮ ಕೈಗೊಂಡಿದೆ.

ಪೊಲೀಸರು ಮತ್ತು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

You May Also Like

More From Author

+ There are no comments

Add yours