ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪತ್ರಕರ್ತರ ಮೇಲೆ ಹಲ್ಲೆ: ಪ್ರತಿಭಟನೆ

1 min read

ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪತ್ರಕರ್ತರ ಮೇಲೆ ಹಲ್ಲೆ: ಪ್ರತಿಭಟನೆ

Tumkurnews
ತುಮಕೂರು: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆದಿದ್ದು, ಪತ್ರಕರ್ತರು ದಿಢೀರ್ ಪ್ರತಿಭಟನೆ ನಡೆಸಿದರು.
‌ನಗರದ ಎಂ.ಜಿ ಕ್ರೀಡಾಂಗಣದಲ್ಲಿ ಶುಕ್ರವಾರ ಮೂರು ದಿನಗಳ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 10 ಸಾವಿರ ಮಂದಿ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಸರ್ಕಾರಿ ನೌಕರರಿಗೆ ಟೀ ಶರ್ಟ್ ವಿತರಣೆಯಲ್ಲಿ ಅವ್ಯವಸ್ಥೆಯಾಗಿದ್ದು, ಈ ಬಗ್ಗೆ ನೌಕರರು ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಇದರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪತ್ರಕರ್ತರ ಮೊಬೈಲ್ ಕಸಿದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ‌.

ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಇಲ್ಲಿದೆ ಆದೇಶ ಪ್ರತಿ

ಷಡಕ್ಷರಿ ವಿರುದ್ಧ ಪ್ರತಿಭಟನೆ: ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ವಿರುದ್ಧ ಪತ್ರಕರ್ತರು ಕ್ರೀಡಾಂಗಣದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ವರದಿ ಮಾಡುತ್ತಿದ್ದ ಪತ್ರಕರ್ತರ ಮೊಬೈಲ್ ಕಿತ್ತು ಷಡಕ್ಷರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪತ್ರಕರ್ತರು ಪ್ರತಿಭಟನೆ ನಡೆಸಿದರು.

ಗೃಹ ಸಚಿವ ಪರಮೇಶ್ವರ್ ಒಡೆತನದ SSIT ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಪ್ರತಿಭಟನೆ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಹಾಗೂ ಪತ್ರಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ರಾಜು ಅವರು ಕ್ರೀಡಾಕೂಟವನ್ನು ಮುಂದೂಡುವುದಾಗಿ ಹೇಳಿದರು.

ತುಮಕೂರು: ಅಕ್ಟೋಬರ್ 28 ಮತ್ತು 29 ರಂದು ನಿಷೇಧಾಜ್ಞೆ; ಜಿಲ್ಲಾಧಿಕಾರಿ ಆದೇಶ

You May Also Like

More From Author

+ There are no comments

Add yours