ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ‌ಗಳು ಖಾಲಿ! ಭರ್ತಿ ಯಾವಾಗ? ಸಚಿವ ಪರಮೇಶ್ವರ್ ಮಾಹಿತಿ

1 min read

ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆ‌ಗಳು ಖಾಲಿ! ಭರ್ತಿ ಯಾವಾಗ? ಸಿಹಿ ಸುದ್ದಿ ನೀಡಿದ ಪರಮೇಶ್ವರ್

Tumkurnews
ತುಮಕೂರು: ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರಿದ್ದು, 2.50 ಲಕ್ಷ ಹುದ್ದೆಗಳು ಖಾಲಿ ಇವೆ. ಇನ್ನು 5 ವರ್ಷದೊಳಗಾಗಿ ಈ ಎಲ್ಲಾ ಹುದ್ದೆಗಳನ್ನು ತುಂಬಲು ನಮ್ಮ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

ಗೃಹ ಸಚಿವ ಪರಮೇಶ್ವರ್ ಒಡೆತನದ SSIT ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆ ಎಂದಿಗೂ ಸಹ ಕ್ರೀಡೆಗೆ ಪ್ರೋತ್ಸಾಹ ನೀಡುತ್ತದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕ್ರೀಡಾಪಟುಗಳನ್ನು ಜಿಲ್ಲೆ ಕೊಡುಗೆಯನ್ನಾಗಿ ನೀಡಿದೆ. ಇತ್ತೀಚೆಗೆ ಪ್ರಾನ್ಸ್ ನಲ್ಲಿ ನಡೆದ ಅಂತರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ ಶಿಫ್‌ನಲ್ಲಿ ಜಿಲ್ಲೆಯ ಹಾಲನೂರಿನ ಪ್ರಿಯಾ ಎಂಬ ಬಾಲಕಿ ಚಿನ್ನದ ಪದಕ ಗಳಿಸಿ ಜಿಲ್ಲೆಯ ಘನತೆಯನ್ನು ಎತ್ತಿ ಹಿಡಿದಿದ್ದಾಳೆ ಎಂದು ಸ್ಮರಿಸಿದರು.
ತಾವೂ ಕೂಡ ಉತ್ತಮ ಕ್ರೀಡಾಪಟುವಾಗಿದ್ದು, ಅಂತರಾಷ್ಟ್ರೀಯ ಚಾಂಪಿಯನ್‌ಶಿಫ್‌ನಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿರುವುದಾಗಿ ತಿಳಿಸಿದ ಸಚಿವರು, ಕ್ರೀಡೆ ಇಂದು ಜನಸಮುದಾಯದ ಮನಸ್ಸನ್ನು ಸೆಳೆದಿದೆ. ಮನಸ್ಸಿನ ಏಕಾಗ್ರತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.
ಈ ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ 3.50 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದ್ದು, ಸರ್ಕಾರಿ ನೌಕರರ ಪ್ರತಿಭೆಗಳು ಈ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೊರಹೊಮ್ಮುವಂತಾಗಲಿ ಎಂದು ಸಚಿವರು ಆಶಿಸಿದರು.

ಪೊಲೀಸರು ಮತ್ತು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಮೇಯರ್ ಪ್ರಭಾವತಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕನಿರ್ದೇಶಕ ರೋಹಿತ್ ಗಂಗಾಧರ್, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಉಪಾಧ್ಯಕ್ಷ ನರಸಿಂಹರಾಜು ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಂಗಣಕ್ಕೆ ಸಚಿವ ಡಾ.ಜಿ‌ ಪರಮೇಶ್ವರ್ ಚಾಲನೆ ನೀಡಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪತ್ರಕರ್ತರ ಮೇಲೆ ಹಲ್ಲೆ: ಪ್ರತಿಭಟನೆ

You May Also Like

More From Author

+ There are no comments

Add yours