ರಾಜ್ಯದ ನೂತನ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್! ಸಿದ್ದರಾಮಯ್ಯಗೆ ರಾಷ್ಟ್ರ ರಾಜಕಾರಣ! ರಾಜ್ಯದಲ್ಲಿ ಅಚ್ಚರಿ
ಬೆಂಗಳೂರು: ಭಾರೀ ಅಚ್ಚರಿಯ ಬೆಳವಣಿಗೆಯಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆ ಶಾಸಕ, ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ!
ಹೌದು, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಲ್ಲಿ ಆದ ಚರ್ಚೆಯಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಗಾದುಗೆಯನ್ನು ದಲಿತ ಸಮುದಾಯದ ಮುಖಂಡರಿಗೆ ನೀಡಲು ತೀರ್ಮಾನಿಸಲಾಗಿದ್ದು, ಮಲ್ಲಿಕಾರ್ಜುನ ಖರ್ಗೆಯನ್ನು ಬದಿಗೊತ್ತಿ ಡಾ.ಜಿ ಪರಮೇಶ್ವರ್’ಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ.
ರಾಜ್ಯ ಸರ್ಕಾರಿ ನೌಕರರಿಗೆ ಮೂರು ಸಿಹಿ ಸುದ್ದಿ ನೀಡಿದ ಗೃಹ ಸಚಿವ ಪರಮೇಶ್ವರ್!
ನವೆಂಬರ್ 5ರ ಬಳಿಕ ಇದು ಅಧಿಕೃತವಾಗಿ ಚಾಲನೆಗೆ ಬರಲಿದ್ದು, ನವೆಂಬರ್ 7 ಅಥವಾ 8 ರಂದು ಡಾ.ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ: ಇಲ್ಲಿದೆ ಆದೇಶ ಪ್ರತಿ
ಪರಮೇಶ್ವರ್ ಮನೆಗೆ ಸಿಎಂ ಭೇಟಿ: ಕಾಂಗ್ರೆಸ್ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಚುನಾವಣೆ ಉಸ್ತುವಾರಿ ನೇಮಕವಾದ ಬೆನ್ನಲ್ಲೇ ಕರ್ನಾಟಕ ಮುಖ್ಯಮಂತ್ರಿ ಗಾದುಗೆ ಬದಲಾವಣೆ ತೀರ್ಮಾನವಾಗಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಡಾ.ಜಿ ಪರಮೇಶ್ವರ್ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ: ತುಮಕೂರಿನಲ್ಲಿ ಆರಂಭದಲ್ಲೇ ಅಪಸ್ವರ: ದೇವೇಗೌಡರ ಸ್ಪರ್ಧೆಗೆ ವಿರೋಧ
ಸಿದ್ದುಗೆ ಸಂಸತ್ ಹೊಣೆ; ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯದ ಲೋಕಸಭೆ ಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಲಾಗುತ್ತಿದೆ. ದಕ್ಷಿಣ ರಾಜ್ಯಗಳ ಸಹ ಉಸ್ತುವಾರಿಯಾಗಿ ಡಿ.ಕೆ ಶಿವಕುಮಾರ್ ಅವರ ನೇಮಕವಾಗಲಿದೆ. ಈ ಮೂಲಕ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರು ಕೇಂದ್ರ ರಾಜಕಾರಣ ಪ್ರವೇಶ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಮೈಸೂರು ಭಾಗದಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಹೈ ಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಾ.ಜಿ ಪರಮೇಶ್ವರ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ನೀಡಲಾಗುತ್ತಿದೆ. ಅಂತಿಮವಾಗಿ ನವೆಂಬರ್ ಮೊದಲ ವಾರದಲ್ಲಿ ಇವೆಲ್ಲವೂ ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ.
ರಾಜಣ್ಣ ಡಿಸಿಎಂಗೆ ಪೈಪೋಟಿ: ಇವೆಲ್ಲಾ ಬೆಳವಣಿಗೆಗಳ ಮಾಹಿತಿಯನ್ನು ಹೊಂದಿದ್ದ ಮಧುಗಿರಿ ಶಾಸಕ, ಸಹಕರಿ ಸಚಿವ ಕೆ.ಎನ್ ರಾಜಣ್ಣ ವಾರದ ಹಿಂದೆಯೇ ರಾಜ್ಯದಲ್ಲಿ ಮೂರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇರಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದ ರಾಜಣ್ಣಗೆ ಡಿಸಿಎಂ ಸ್ಥಾನ ನೀಡಲು ಸಿದ್ದರಾಮಯ್ಯ ಕೂಡ ಶರತ್ತು ವಿಧಿಸಿದ್ದಾರೆ ಎನ್ನಲಾಗಿದೆ.
+ There are no comments
Add yours