ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ
Tumkurnews
ತುಮಕೂರು: ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಸ್ವಯಂ ಉದ್ಯೋಗ (ನೇರಸಾಲ), ಉದ್ಯಮಶೀಲತಾ ಯೋಜನೆ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಉದ್ಯಮಶೀಲತಾ ಯೋಜನೆ (ಸ್ವಾವಲಂಬಿ ಸಾರಥಿ), ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ, ಗಂಗಾಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು.
ದ್ವಿಚಕ್ರ, ತ್ರಿಚಕ್ರ ವಾಹನ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 29ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://Sevasundhu.karnataka.gov.in ಕರ್ನಾಟಕಒನ್, ಗ್ರಾಮಒನ್ ಅಥವಾ ಜಿಲ್ಲಾ ವ್ಯವಸ್ಥಾಪಕರು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃಧ್ದಿ ನಿಗಮ, ಆಯಾ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ದಿಮೆ ಸ್ಥಾಪನೆಗೆ 20 ಲಕ್ಷ ಸಾಲ, 10 ಲಕ್ಷ ಸಬ್ಸಿಡಿ; ಇಂದೇ ಅರ್ಜಿ ಸಲ್ಲಿಸಿ
+ There are no comments
Add yours