ಬರ: ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ತಲುಪಿವೆ: ಬಿ.ಎಸ್ ಯಡಿಯೂರಪ್ಪ

1 min read

ಬರ: ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ತಲುಪಿವೆ: ಬಿ.ಎಸ್ ಯಡಿಯೂರಪ್ಪ

Tumkurnews
ತುಮಕೂರು: ವಿದ್ಯುತ್ ಸಮಸ್ಯೆಯಿಂದಾಗಿ ಬಹುತೇಕ ಸಣ್ಣ ಮತ್ತು ಮದ್ಯಮ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ತಲುಪಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದರು.

ತುಮಕೂರು: ನವೆಂಬರ್ 5 ರಿಂದ 15ರವರೆಗೆ ವಿದ್ಯುತ್ ವ್ಯತ್ಯಯ
ಬಿಜೆಪಿ ಪಕ್ಷದವತಿಯಿಂದ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಬರ ಅಧ್ಯಯನ ಪ್ರವಾಸದ ವೇಳೆ ಬೆಳ್ಳಾವಿ ಗ್ರಾಮದಲ್ಲಿ ಮಾತನಾಡಿದ ಅವರು, ಬರ ಅಧ್ಯಯನದ ಭಾಗವಾಗಿ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಭೆ ನಡೆಸಿದ್ದು ಕೈಗಾರಿಕೆಗಳು ಅನುಭವಿಸುತ್ತಿರುವ ತೊಂದರೆಗಳ ಕುರಿತು ಇದುವರೆಗೂ ಯಾರು ಸಹ ಕ್ರಮ ಕೈಗೊಂಡಿಲ್ಲ. ಜನರ ಕಷ್ಟ ಅರಿಯವು ಉದ್ದೇಶದಿಂದ ನಾನು ರಾಜ್ಯ ಪ್ರವಾಸ ಕೈಗೊಂಡಿದ್ದೇನೆ ಎಂದರು.

ಬರ: ತುಮಕೂರು ಜಿಲ್ಲೆಯ 415 ಗ್ರಾಮಗಳಲ್ಲಿ ಜಲಕ್ಷಾಮ‌
ನಾನು ಯಾರ ಮಾತಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಸರಕಾರ ಜಾರಿಗೆ ತಂದಿದ್ದ ಕಿಸಾನ್ ಸನ್ಮಾನ್ ಯೋಜನೆಯನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ಪ್ರವಾಸದ ವೇಳೆ ಎಲ್ಲಾ ವಿಚಾರವಾಗಿ ಅಧ್ಯಯನ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಿ, ರೈತರು ಹಾಗೂ ಜನರ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.

ಬರ: ಜಾನುವಾರುಗಳ ಮೇವಿಗಾಗಿ ಹೊರ ರಾಜ್ಯಗಳಿಗೆ ಮೊರೆ
ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ, ಮಾಜಿ ಸಂಸದ ಮುದ್ದಹನುಮೇಗೌಡ, ಬಿಜೆಒಇ ಜಿಲ್ಲಾಧ್ಯಕ್ಷ ರವಿಹೆಬ್ಬಾಕ, ಮಾಜಿ ಮಂತ್ರಿ ಬಿ.ಸಿ.ನಾಗೇಶ್, ಎಂ.ಎಲ್.ಸಿ ರವಿಕುಮಾರ್, ಶಾಸಕ ಜ್ಯೋತಿಗಣೇಶ್, ಮಾಜಿ ಎಂ.ಎಲ್.ಸಿ.ಡಾ.ಎA.ಆರ್.ಹುಲಿನಾಯ್ಕರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ, ಮಾಜಿ ಶಾಸಕ ರಾಜೇಶಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ.ನAದೀಶ್, ಗ್ರಾಮಾಂತರ ಅಧ್ಯಕ್ಷ ಶಂಕರ್, ಸಿದ್ದೇಗೌಡ, ಮತ್ತಿತರ ಮುಖಂಡರು ಭಾಗವಹಿಸಿದ್ದರು.
ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ಬಿಜೆಪಿ ಬರ ಅಧ್ಯಯನ ತಂಡ, ರೈತರು, ಕಾರ್ಮಿಕರು, ಕೈಗಾರಿಕೋದ್ಯಮಿಗಳ ಸಭೆ ನಡೆಸಿ, ಅವರ ಸಮಸ್ಯೆಯನ್ನು ಆಲಿಸಿತು.

ತುಮಕೂರು ಜಿಲ್ಲೆಯಲ್ಲಿ ಕೇಂದ್ರ ತಂಡದಿಂದ ಬರ ಪರಿಶೀಲನೆ: 1880 ಕೋಟಿ ನಷ್ಟ: ಸಮಗ್ರ ವರದಿ

You May Also Like

More From Author

+ There are no comments

Add yours